*ಗೋಣಿಕೊಪ್ಪ, ಫೆ. ೧೪: ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೩೬ ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ನೆರವೇರಿಸಿದರು.
ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಂ.ಜಿ. ನಗರ, ಟಿ.ಆರ್. ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಸ್ಥಳೀಯ ಸಾರ್ವಜನಿಕರ ಬೇಡಿಕೆಯಂತೆ ಶಾಸಕರು ಅನುದಾನ ಒದಗಿಸಿದ್ದು, ಶೀಘ್ರದಲ್ಲಿ ಈ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಯಿತು.
ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಉಪಾಧ್ಯಕ್ಷ ಆಲೀರ ರಶೀದ್, ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಕೊಳೇರ ಭಾರತಿ, ಮೂಕಳೇರ ಸುನಿತಾ, ರಾಶಿಕಾ, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜುನೈದ್, ಮುಖಂಡರುಗಳಾದ ಮೂಕಳೇರ ಕುಶಾಲಪ್ಪ, ಶಾಜಿ ಅಚ್ಚುತನ್, ಅಜ್ಜಿಕುಟ್ಟಿರ ಪೊನ್ನು, ಅಣ್ಣಳಮಾಡ ಹರೀಶ್, ಪೂವಣ್ಣ, ಕುಂಡಚ್ಚಿರ ಮಂಜು ದೇವಯ್ಯ, ಭವಿನ್, ಅಯೂಬ್, ಕಾರ್ಯಕರ್ತರು ಹಾಗೂ ಪ್ರಮುಖರು ಹಾಜರಿದ್ದರು.