*ಗೋಣಿಕೊಪ್ಪ, ಫೆ. ೧೪: ಪೊನ್ನಂಪೇಟೆ ತಾಲೂಕು ಬಾಳೆಲೆಯ ದೇವನೂರು ಗ್ರಾಮದ ಶ್ರೀ ಮಹಾದೇವರ ದೇವಸ್ಥಾನದ ಪ್ರತಿಷ್ಠಾ-ಅಷ್ಟಬಂಧ ಬ್ರಹ್ಮಕಲಶೋತ್ಸವ ತಾ. ೨೨ ರಿಂದ ೨೫ ರವರೆಗೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಬಾನಂಡ ಪ್ರಥ್ಯು ಮಾಹಿತಿ ನೀಡಿದ್ದಾರೆ.

ತಾ. ೨೫ ರಂದು ನಡೆಯುವ ಸಮಾರಂಭಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ

ರಾಮಲಿಂಗಾ ರೆಡ್ಡಿ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಆದೇಂಗಡ ವಿನು ಉತ್ತಪ್ಪ, ಉಸ್ತುವಾರಿ ಆದೇಂಗಡ ವಾಸು ಬೆಳ್ಯಪ್ಪ, ಆದೇಂಗಡ ಚಿಟ್ಟಿ ರಮೇಶ್ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದ್ದಾರೆ.