ಮಡಿಕೇರಿ, ಫೆ. ೧೬: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಆಹಾರ ವಾಹಿನಿ (ಆಹಾರ ಕಿಯೋಸ್ಕ್), ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.೩ ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್/ಹಣಕಾಸು ಸಂಸ್ಥೆಗಳಿAದ ಸಾಲ ಪಡೆಯಬಹುದಾಗಿದೆ.

ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳಿಗೆ ಸೇರಿದ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-೨ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.೩ ಲಕ್ಷ ಒಳಗಿರಬೇಕು. ಅರ್ಜಿದಾರರ ವಯಸ್ಸು ೨೧ ರಿಂದ ೪೫ ವರ್ಷಗಳ ಮಿತಿಯಲ್ಲಿರಬೇಕು.

ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ದಾಖಲಾತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು.

ಒAದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-೨ರ ಸವಿತಾ ಹಾಗೂ ಅದರ ಉಪಜಾತಿಗೆ ಸೇರಿದ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ದಿನಾಂಕ: ೦೭-೦೩-೨೦೨೬ ರಂದು ಕೊನೆಯ ದಿನವಾಗಿದೆ. ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸವಿತಾ ಸಮಾಜ ನಿಗಮದ ವೆಬ್ ಸೈಟ್ ತಿತಿತಿ.ಞssಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: ೦೮೦-೨೨೩೭೪೮೩೨, ೮೦೫೦೭೭೦೦೦೪ ಮತ್ತು ೮೦೫೦೭೭೦೦೦೫ ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ಧಾಗಿ ಅಥವಾ ದೂರವಾಣಿ ಸಂಖ್ಯೆ:೦೮೨೭೨-೨೨೧೬೫೬ ರ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.