ಕೂಡಿಗೆ, ಫೆ ೧೬: ಪ್ರಾಥಮಿಕ ಆರೋಗ್ಯ ಕೇಂದ್ರ ಕೂಡಿಗೆ ವತಿಯಿಂದ ಮೊರಾರ್ಜಿ ವಸತಿ ಶಾಲೆಯಲ್ಲಿ ಸ್ಪರ್ಶ್ ಕುಷ್ಟರೋಗ ಜಾಗೃತಿ ಅಭಿಯಾನ-೨೦೨೬ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು.
ಕಾರ್ಯಕ್ರಮದ ಮಹತ್ವದ ಬಗ್ಗೆ ತಾಲೂಕು ಆರೋಗ್ಯ ಅಧಿಕಾರಿಯವರ ಕಛೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿಶ್ವಜ್ಞ ಅವರು ಮಾಹಿತಿ ನೀಡಿದರು.
ಕುಷ್ಟರೋಗದ ಲಕ್ಷಣಗಳು, ಚಿಕಿತ್ಸೆಯ ವಿವರ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಆರೋಗ್ಯ ಶಿಕ್ಷಣವನ್ನು ನೀಡಲಾಯಿತು. ಇಲಾಖೆಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ಯನ್ನು ನೀಡಲಾಯಿತು. ಸ್ಪರ್ಶ್ ಕುಷ್ಟರೋಗ ನಿರ್ಮೂಲನಾ ಅಭಿಯಾನದ ಪ್ರತಿಜ್ಞೆಯ ವಿಧಿಯನ್ನು ಭೋದಿಸಲಾಯಿತು. ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಆರೋಗ್ಯ ಶಿಕ್ಷಣವನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಚಂದ್ರೇಶ್ ಶಾಲಾ ಪ್ರಾಂಶುಪಾಲೆ ಕೆ.ಆರ್. ಭಾರತಿ, ಅರೋಗ್ಯ ಇಲಾಖೆಯ ಮೀನಾ, ಶಿಕ್ಷಕ ವೃಂದ ಹಾಜರಿದ್ದರು.