ಮಡಿಕೇರಿ, ಫೆ.೧೬: ಕೋರಂಗಾಲ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ೨೨ನೇ ವರ್ಷದ ವಾರ್ಷಿಕೋತ್ಸವವು ಶಾಲಾ ಆವರಣದಲ್ಲಿ ವಿಜೃಂಭಣೆಯಿAದ ನೆರವೇರಿತು.
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಪಥಸಂಚಲನದೊAದಿಗೆ ಕಾರ್ಯಕ್ರಮ ಆರಂಭವಾಗಿ, ಪ್ರಾರ್ಥನೆಯ ನಂತರ ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಫ್.ಎಂ.ಕೆ.ಎA.ಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಮೇಜರ್ ರಾಘವ ಬಿ, ಭಾಗಮಂಡಲ ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ದಿವಾಕರ್ ಕೆ.ಜೆ, ಪ್ರಮುಖರಾದ ಪೆಮ್ಮುಡಿಯಂಡ ಎಂ ಉತ್ತಪ್ಪ ಹಾಗೂ ನಿಡುಬೆ ಉಲ್ಲಾಸ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿಗಳಾದ ಡಾ. ಮೇಜರ್ ರಾಘವ ಬಿ. ಅವರು ಕೇವಲ ಪಾಠಪುಸ್ತಕ ಜ್ಞಾನವಷ್ಟೇ ಸಾಕಾಗುವುದಿಲ್ಲ; ಜೀವನದಲ್ಲಿ ಯಶಸ್ಸು ಸಾಧಿಸಲು ಮೌಲ್ಯಾಧಾರಿತ ಶಿಕ್ಷಣ ಅತ್ಯಗತ್ಯವೆಂದು ಹೇಳಿದರು.
ದಿವಾಕರ್ ಕೆ.ಜೆ ಅವರು ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಮತ್ತು ತಂತ್ರಜ್ಞಾನವನ್ನು ಮನರಂಜನೆಗೆ ಮಾತ್ರ ಬಳಸದೆ ಜ್ಞಾನಾರ್ಜನೆಗೆ ಬಳಸಬೇಕು ಎಂದು ಸಲಹೆ ನೀಡಿದರು. ದಿನನಿತ್ಯ ಓದುವ ಅಭ್ಯಾಸ, ಪ್ರಶ್ನಿಸುವ ಮನೋಭಾವ ಹಾಗೂ ಹೊಸ ವಿಷಯಗಳನ್ನು ತಿಳಿಯುವ ಕುತೂಹಲ ವಿದ್ಯಾರ್ಥಿಗಳ ಬೆಳವಣಿಗೆಗೆ ಅಗತ್ಯವೆಂದು ಹಿತವಚನ ನೀಡಿದರು.
ಪೆಮ್ಮುಡಿಯಂಡ ಎಂ. ಉತ್ತಪ್ಪ ಅವರು ಪೋಷಕರು ಮತ್ತು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಶಿಸ್ತು, ಸಮಯಪಾಲನೆ, ಹಿರಿಯರಿಗೆ ಗೌರವ ಹಾಗೂ ದೇಶಭಕ್ತಿ ಮನೋಭಾವ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲ ಗುಣಗಳೆಂದು ತಿಳಿಸಿದರು. ಶಿಕ್ಷಣದ ಜೊತೆಗೆ ಕ್ರೀಡೆ, ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು.
ವರ್ಷಪೂರ್ತಿ ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮದ ವಂದನಾರ್ಪಣೆಯನ್ನು ರೇಷ್ಮಾ ಬೋಪಣ್ಣ ನೆರವೇರಿಸಿದರು. ಶ್ರುತಿ ಬಿ.ಪಿ. ಹಾಗೂ ಮಣವಟ್ಟಿರ ದಯಾ ಚಿಣ್ಣಪ್ಪ ಕಾರ್ಯಕ್ರಮವನ್ನು ನಿರೂಪಿಸಿದರು. ಮುಖ್ಯ ಶಿಕ್ಷಕರಾದ ಚೀಯಕಪೂವಂಡ ಶ್ವೇತನ್ ಚಂಗಪ್ಪ ಅವರು ಸ್ವಾಗತಿಸಿದರು. ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ವಿವರಿಸುವ ಶಾಲಾ ವರದಿಯನ್ನು ಸುನಿತಾ ಅವರು ವಾಚಿಸಿದರು.
ಸಮಾರಂಭದ ಉಪಾಧ್ಯಕ್ಷೆಯಾಗಿ ಚೀಯಕಪೂವಂಡ ತಿಲಕಮ್ಮ ಕಾರ್ಯ ನಿರ್ವಹಿಸಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಚೀಯಕಪೂವಂಡ ಮಿಥುನ್ ಚಂಗಪ್ಪ ಮತ್ತು ಚೀಯಕಪೂವಂಡ ಸಚಿನ್ ಪೂವಯ್ಯ ಹಾಜರಿದ್ದರು.
ಸಂಜೆ ೬ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊAಡವು. ಈ ಕಾರ್ಯಕ್ರಮದ ನಿರೂಪಣೆಯನ್ನು ಮಣವಟ್ಟಿರ ದಯಾ ಚಿಣ್ಣಪ್ಪ ಹಾಗೂ ಶಿಕ್ಷಕರಾದ ಚಿತ್ರಾ ಸಿ.ಆರ್. ಮತ್ತು ಶ್ರುತಿ ಕಿಶೋರ್ ನಡೆಸಿಕೊಟ್ಟರು. ವಿದ್ಯಾರ್ಥಿಗಳು ನೃತ್ಯ, ಗಾಯನ, ನಾಟಕ, ಯೋಗ, ಕರಾಟೆ ಹಾಗೂ ದೇಶಭಕ್ತಿ ಪ್ರದರ್ಶನಗಳ ಮೂಲಕ ಪ್ರೇಕ್ಷಕರ ಮನಗೆದ್ದರು.
ಕಾರ್ಯಕ್ರಮದಲ್ಲಿ ಪೋಷಕರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.