ಕುಶಾಲನಗರ, ಫೆ. ೧೬: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ವತಿಯಿಂದ ಕುಶಾಲನಗರ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಮಟ್ಟದ ಪಿ.ಎಂ ಶ್ರೀ ಶಾಲೆಗಳ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ ಶಶಿಧರ್, ಕ್ರೀಡಾಕೂಟ ಉದ್ಘಾಟಿಸಿ, ಧ್ವಜಾರೋಹಣ ನೆರವೇರಿಸಿ ಮಕ್ಕಳ ಕ್ರೀಡಾ ಪ್ರತಿಭೆ ಅನಾವರಣಕ್ಕೆ ಇಂತಹ ಕ್ರೀಡಾಕೂಟಗಳು ಸುವರ್ಣ ಅವಕಾಶವಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ್, ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿ, ಮಕ್ಕಳು ಕ್ರೀಡಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವಂತೆ ತಿಳಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಸದಾಶಿವಯ್ಯ ಎಸ್ ಪಲ್ಲೇದ್ ಮಾತನಾಡಿ, ಜಿಲ್ಲೆಯಲ್ಲಿ ಏಳು ಪಿ.ಎಂ ಶ್ರೀ ಶಾಲೆಗಳಿದ್ದು, ಪ್ರಥಮವಾಗಿ ಈ ಬಾರಿ ಕ್ರೀಡಾಕೂಟ ಆಯೋಜನೆ ಕುಶಾಲನಗರದಲ್ಲಿ ಮಾಡಿರುವುದು ಹೆಮ್ಮೆಯ ವಿಚಾರ.
ಎರಡು ಗುಂಪು ಆಟಗಳು ಹಾಗೂ ಎರಡು ವೈಯಕ್ತಿಕ ಸ್ಪರ್ಧೆಗಳು ಸೇರಿದಂತೆ ಇನ್ನಿತರ ಕ್ರೀಡೆಗಳನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದನ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಕೃಷ್ಣಪ್ಪ, ಪುರಸಭೆ ಮಾಜಿ ಸದಸ್ಯ ಆನಂದ್ ಕುಮಾರ್, ಗ್ರೇಡ್-೨ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಪೂರ್ಣೇಶ್, ಶಾಲಾ ಮುಖ್ಯ ಶಿಕ್ಷಕ ಸಣ್ಣಸ್ವಾಮಿ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಸವಿತಾ, ಸದಸ್ಯೆ ಸುನೀತಾ, ಉಪ ನಿರ್ದೇಶಕರ ಕಚೇರಿ ಪಿ.ಎಂ ಶ್ರೀ ನೋಡಲ್ ಅಧಿಕಾರಿ ಗೀತಾ, ತೀರ್ಪುಗಾರರಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರತಾಪ್, ಬೋಜೆಗೌಡ, ಸೋಮಶೇಖರ್, ಉತ್ತಪ್ಪ, ದೇವಾನಂದ್ ಚಂದ್ರಾವತಿ, ಪ್ರೇಮಲತಾ ಶೆಟ್ಟಿ, ಸುರೇಶ್ ಕುಮಾರ್, ಜಾನ್ಸನ್ ಮುಂತಾದವರು ಭಾಗವಹಿದ್ದರು.