ಮಡಿಕೇರಿ, ಫೆ.೧೬: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಡಗು-ಮಡಿಕೇರಿ, ಔಟ್‌ಲಾವುಡ್ ಇಂಡಿಯಾ ಫೌಂಡೇಶನ್ ಮತ್ತು ವಕೀಲರ ಸಂಘ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ತಾ.೧೮ ರಿಂದ ೨೧ ರವರೆಗೆ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ ನಡೆಯಲಿದೆ.
ಫೆಬ್ರವರಿ ೧೮ ರಂದು ಬೆಳಗ್ಗೆ ೧೦ ಗಂಟೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧಿಶರಾದ ಹೊಸಮನಿ ಪುಂಡಲಿಕ ಅವರು ಉದ್ಘಾಟಿಸಲಿದ್ದಾರೆ.
ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್ ಅಧ್ಯಕ್ಷತೆ ವಹಿಸಲಿದ್ದು, ೧ ನೇ ಅಪರ ಜಿಲ್ಲಾ ಮತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಸಿ.ಕೆ.ಬಸವರಾಜ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ಸಿ.ವೀರಭದ್ರಯ್ಯ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ಡಿ.ಎಸ್.ವಿನುತ ಪಾಲ್ಗೊಳ್ಳಲಿದ್ದಾರೆ.
ತರಬೇತುದಾರರಾದ ಮೀಮಾನ್ಸ ಸಿಂಗ್, ಶಮಾ ಡಿ., ನಿಹಾರಿಕಾ ನಾಯ್ಡು ಅವರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ.