ಮಡಿಕೇರಿ, ಫೆ. ೧೬: ಕಳೆದ ೧೦ ವರ್ಷಗಳಿಂದ ಪೊನ್ನಂಪೇಟೆ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ -ಸಿ.ಆರ್.ಪಿ. ಆಗಿ ಕರ್ತವ್ಯ ನಿರ್ವಹಿಸುತ್ತಿರುವ ತಿರುನೆಲ್ಲಿಮಾಡ ಜೀವನ್ ಅವರನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಜುನೈದ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಟಿ.ಜೆ. ಆನಂದ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಪಿ. ಮಹೇಶ್, ಹಿರಿಯರಾದ ಕಾಟಿಮಡ ಜಿಮ್ಮಿ ಅಣ್ಣಯ್ಯ, ಮುಖ್ಯ ಶಿಕ್ಷಕರಾದ ಬಿ.ಎಂ. ವಿಜಯ್, ಸಮೂಹ ಸಂಪನ್ಮೂಲ ವ್ಯಕ್ತಿ ಅಮ್ಮತ್ತೀರ ವಾಸು ವರ್ಮ ಮತ್ತು ಶಿಕ್ಷಕರು ಹಾಜರಿದ್ದರು.