ನಾಪೋಕ್ಲು, ಫೆ.೧೬: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿAದ ಕಾಫಿ ಬೆಳೆಯ ಬಗ್ಗೆ ಬೆಳೆಗಾರರಿಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.
ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ವಹಿಸಿ ಕಾರ್ಯಗಾರದ ಉದ್ದೇಶದ ಬಗ್ಗೆ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಚೆಟ್ಟಳ್ಳಿಯ ಕಾಫಿ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳಾದ ಡಾ.ಎಸ್.ಎ ನಾಡಫ್, ಡಾ.ಶಿವಲಿಂಗು ಬಿ.ಆರ್, ಪವನ್ ಅವರುಗಳು ಭಾಗವಹಿಸಿ ರೈತ ಸದಸ್ಯರಿಗೆ ಕಾಫಿ ಬೆಳೆಯ ಬಗ್ಗೆ ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಅಶೋಕ ಪಿ.ಎಂ, ಸಕ್ಡೆನ್ ಕಾಫಿ ಇಂಡಿಯಾ ಲಿಮಿಟೆಡ್ ಕುಶಾಲನಗರದ ಸಂಯೋಜಕರಾದ ಪ್ರಕೃತಿ ಪೊನ್ನಮ್ಮ ಹಾಗೂ ಉದಯ್ ಕುಮಾರ್ ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಸಂಘದ ನಿರ್ದೇಶಕರುಗಳು ಹಾಗೂ ರೈತ ಸದಸ್ಯರು ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ನಂಜಪ್ಪ ನಿಡ್ಯಮಲೆ ಸಂಪನ್ಮೂಲ ವ್ಯಕ್ತಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು.