ಮಡಿಕೇರಿ, ಫೆ. ೧೬: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನೀಡಲಾಗುವ ಪತ್ರಿಕಾರಂಗದ ಭೀಷ್ಮ ಬಿ.ಎಸ್. ಗೋಪಾಲಕೃಷ್ಣ ಹೆಸರಿನ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ತಾ.೧೯ ರಂದು ಸಂಜೆ ೬ ಗಂಟೆಗೆ ಮಡಿಕೇರಿಯಲ್ಲಿ ಕೊಡಗು ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದೆ. ಮಡಿಕೇರಿಯ ವೈದ್ಯ ಸಾಹಿತಿ ಡಾ.ಕೆ.ಬಿ. ಸೂರ್ಯಕುಮಾರ್ ಅವರಿಗೆ ಅಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ನಗರದ ರೆಡ್ ಬ್ರಿಕ್ಸ್ ಇನ್‌ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತ ಸಮಾರಂಭವನ್ನು ಹಿರಿಯ ಸಾಹಿತಿ ಬಿ.ಎ.ಷಂಶುದ್ದೀನ್ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಬಾಲಸುಬ್ರ‍್ರಹ್ಮಣ್ಯ ಕಂಜರ್ಪಣೆ, ದಿ. ಬಿ.ಎಸ್. ಗೋಪಾಲಕೃಷ್ಣ ಹೆಸರಿನ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಕೊಡಗು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವಕಾಮತ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಜಿ.ರಾಜೇಂದ್ರ, ಬಿ.ಜಿ. ಅನಂತಶಯನ, ಟಿ.ಪಿ. ರಮೇಶ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ., ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಪಾಲ್ಗೊಳ್ಳಲಿದ್ದಾರೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.