ಮಡಿಕೇರಿ, ಫೆ. ೧೬: ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬನಶಂಕರಿ ಇಕೋ-ಕ್ಲಬ್ ವತಿಯಿಂದ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕರಾದ ಡಾ.ಜಮೀರ್ ಅಹ್ಮದ್‌ರಿಂದ ಸರ್ಕಾರಿ ಶಾಲಾ ಮಕ್ಕಳಿಗೆ “ಪರಿಸರಕ್ಕಾಗಿ ಜೀವನ ಶೈಲಿ ಬದಲಾವಣೆ” ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ ತಾಲೂಕು ಕ್ಷೇತ್ರ ಸಮನ್ವಯ ಅಧಿಕಾರಿ ಮಂಜೇಶ್ ಭಾಗಿಯಾಗಿ ಮಕ್ಕಳ ಜೊತೆ ಮಾಹಿತಿ ವಿನಿಮಯ ಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಎಚ್.ಎಂ. ವೆಂಕಟೇಶ, ಇಕೋ ಕ್ಲಬ್ ಉಸ್ತುವಾರಿ ಶಿಕ್ಷಕಿ ಕೆ.ಎಸ್ ರಮ್ಯಾ, ಶಿಕ್ಷಕರಾದ ಶಿವಾನಂದ, ದೈಹಿಕ ಶಿಕ್ಷಣ ಶಿಕ್ಷಕಿಯಾದ ವಂಜಮ್ಮ ಮತ್ತು ಶಾಲಾ ಮಕ್ಕಳು ಭಾಗಿಯಾಗಿದ್ದರು.