ವೀರಾಜಪೇಟೆ, ಫೆ. ೧೬: ಬಡವರ ಕಲ್ಯಾಣಕ್ಕಾಗಿ ಮನರೇಗಾ ಯೋಜನೆಯನ್ನು ಕಾಂಗ್ರೆಸ್ ಸರಕಾರ ಜಾರಿ ಮಾಡಿತ್ತು. ಇದರಿಂದ ದೇಶದ ಕೋಟ್ಯಂತರ ಬಡವರಿಗೆ ನೆರವಾಗಿದೆ. ಆದರೆ, ಈ ಯೋಜನೆಯನ್ನು ಕೇಂದ್ರದ ಬಿಜೆಪಿ ಸರಕಾರ ಪರೋಕ್ಷವಾಗಿ ರದ್ದುಪಡಿಸಿ ದೇಶದ ಬಡವರ ಮೇಲೆ ದಾಳಿ ನಡೆಸಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಅನ್ಯಾಯ ಮಾಡಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಆರೋಪಿಸಿದರು.
ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಕೇಂದ್ರ ಸರಕಾರ ಬದಲಿಸಿರುವುದನ್ನು ಖಂಡಿಸಿ ಹಾಗೂ ಯೋಜನೆ ಮರು ಜಾರಿಗೆ ಆಗ್ರಹಿಸಿ ಕಾವೇರಿ ಕಾಲೇಜು ಸಮೀಪದಿಂದ ವೀರಾಜಪೇಟೆ ಕಾರು ನಿಲ್ದಾಣದವರೆಗೆ ಜರಗಿದ ಮನರೇಗಾ ಬಚಾವೊ ಸಂಗ್ರಾಮ ಪಾದಯಾತ್ರೆ ಕಾರ್ಯಕ್ರಮದಲ್ಲಿ ಕಾವೇರಿ ಕಾಲೇಜು ಸಮೀಪ ಮನರೇಗಾ ಬಚಾವೊ ಸಂಗ್ರಾಮದ ಪಾದಯಾತ್ರೆಗೆ ಚಾಲನೆ ನೀಡಿ ಪಾದಯಾತ್ರೆಯಲ್ಲಿ ಪಾಲ್ಗೊಂಡು ವೀರಾಜಪೇಟೆ ಕಾರು ನಿಲ್ದಾಣದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕೇಂದ್ರದ ಬಿಜೆಪಿ ಸರ್ಕಾರ ಮನರೇಗಾ ಯೋಜನೆಗೆ ಕತ್ತರಿ ಹಾಕುವ ಮೂಲಕ ಮಹಾತ್ಮಾ ಗಾಂಧಿಯವರ ಹೆಸರನ್ನು ಅಳಿಸಿದ್ದು ೪ಆರನೇ ಪುಟಕ್ಕೆ
(ಮೊದಲ ಪುಟದಿಂದ) ಮಾತ್ರವಲ್ಲದೆ ದೇಶದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯ ಮಾಡಿದೆ. ಕೇಂದ್ರದ ಹೊಸ ಕಾನೂನಿನ ಪ್ರಕಾರ ಮುಂದಿನ ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಿಂದ ಯಾವುದೇ ಕೂಲಿ, ಕಾಮಗಾರಿ ನಡೆಯುವುದು ಸಾಧ್ಯವಿಲ್ಲ. ಕೇಂದ್ರದ ನಿರ್ಧಾರದ ವಿರುದ್ಧ ಪಕ್ಷಾತೀತವಾಗಿ ದೇಶಾದ್ಯಂತ ಹೋರಾಟ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಬಡವರ ಪರ ಕಾಂಗ್ರೆಸ್ ಮಾತ್ರ ಎಂಬುದನ್ನು ದೇಶದ ಜನತೆ ಅರ್ಥಮಾಡಿಕೊಂಡಿದ್ದಾರೆ ಎಂದು ಶಾಸಕರು ಹೇಳಿದರು. ಮನರೇಗಾ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿನ ಹಿಂದುಳಿದ ವರ್ಗದವರಿಗೆ ಅನುಕೂಲವಾಗುತ್ತಿತ್ತು. ಇದೀಗ ಇದನ್ನು ಕೇಂದ್ರ ಸರಕಾರ ಕಿತ್ತುಕೊಂಡು ಜನತೆಗೆ ಅನ್ಯಾಯವೆಸಗಿದೆ. ಈ ಮೊದಲಿದ್ದ ಯೋಜನೆಯನ್ನೆ ಸರಕಾರ ಮತ್ತೆ ಜಾರಿಗೊಳಿಸಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ. ಯೋಜನೆಗೆ ಕೇಂದ್ರ ಸರಕಾರದಿಂದ ಶೇ ೯೦ ರಷ್ಟು ಅನುದಾನ ಬರುತ್ತಿತ್ತು. ಇದೀಗ ಅನುದಾನವಿಲ್ಲದಂತಾಗಿದೆ. ದೇಶದ ಸಂವಿಧಾನದ ಮೇಲೆ ನಂಬಿಕೆಯಿಲ್ಲದ ಕೇಂದ್ರದ ಬಿ.ಜೆ.ಪಿ ಸರಕಾರ ಸಂವಿಧಾನವನ್ನು ಹಾಳುಗೆಡವಿದೆ ಎಂದು ದೂರಿದರು. ಪ್ರಧಾನಿ ಮೋದಿಯವರ ಜನಪ್ರಿಯತೆ ಕುಸಿಯುತ್ತಿದೆ. ಸರ್ವಾಧಿಕಾರಿ ಧೋರಣೆಯಿಂದ ಜನರು ಬೇಸತ್ತಿದ್ದಾರೆ. ಇಡಿ, ಚುನಾವಣಾ ಆಯೋಗ, ಸಿಬಿಐ ಸೇರಿದಂತೆ ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ದುರುಪಯೋಗಪಡಿಸಿಕೊಳ್ಳುತ್ತಿದೆ. ಚಿನ್ನ, ಬೆಳ್ಳಿ, ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರಿಗೆ ಬದುಕಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಕೆ.ಪಿ.ಸಿ.ಸಿ ವಕ್ತಾರ ಎಂ. ಲಕ್ಷö್ಮಣ್ ಮಾತನಾಡಿ, ಕಾಂಗ್ರೆಸ್ ಸರಕಾರ ಜನತೆಗೆ ಉಪಯೋಗವಾಗುವ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಆದರೆ ಈ ಹಿಂದೆ ಕಾಂಗ್ರೆಸ್ ಜಾರಿಗೊಳಿಸಿದ ಜನೋಪಯೋಗಿ ಯೋಜನೆಗಳನ್ನು ಇದೀಗ ಬಿಜೆಪಿ ಸರಕಾರ ಹಾಳುಗೆಡವುತ್ತಿರುವುದು ದುರಾದೃಷ್ಟಕರ ಎಂದರು.
ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಮಾತನಾಡಿ, ಯೋಜನೆಯಿಂದ ಮಹಾತ್ಮ ಗಾಂಧಿಯ ಹೆಸರನ್ನು ತೆಗೆಯುವ ಹೀನ ಕೆಲಸವನ್ನು ಬಿ.ಜೆ.ಪಿ ಮಾಡಿರುವುದು ಖಂಡನೀಯ ಎಂದರÀಲ್ಲದೆ ಕೇಂದ್ರದಿAದ ಸಾಕಷ್ಟು ಯೋಜನೆಗಳು ಜಾರಿಯಾಗುತ್ತಿದ್ದರೂ ಅವುಗುಳು ಜಿಲ್ಲೆಯನ್ನು ತಲುಪುತ್ತಿಲ್ಲ ಎಂದರು.
ಕಾAಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಕಾಂಗ್ರೆಸ್‌ನ ಏಳಿಗೆಯನ್ನು ಸಹಿಸದ ಬಿಜೆಪಿ ಕುತಂತ್ರದ ಕೆಲಸ ಮಾಡುತ್ತಿದೆ. ಯೋಜನೆಯ ಜಾರಿಗೆ ಹೋರಾಟ ಅಗತ್ಯ ಎಂದರು. ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಎಚ್ ಮತಿನ್, ಪುರಸಭೆ ಮಾಜಿ ಸದಸ್ಯರಾದ ರಾಜೇಶ್ ಪದ್ಮನಾಭ, ಮಹಮ್ಮದ್ ರಾಫಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ಕೊಳುಮಂಡ ರಫಿಕ್, ವಕ್ತಾರ ತೆನ್ನಿರ ಮೈನಾ, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಜಗದೀಶ್ ಕಾಣತಂಡ, ಪಟ್ಟಡ ರಕ್ಷಿತ್, ಶಬೀರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್, ಶಶಿಧರನ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮೀದೇರಿರ ನವೀನ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಕೆಪಿಸಿಸಿ ಪ್ರಮುಖ ಟಿ.ಪಿ. ರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಮುಖಂಡರುಗಳಾದ ಚಿಲ್ಲವಂಡ ಕಾವೇರಪ್ಪ, ಕೆ.ಬಿ. ಶಾಂತಪ್ಪ, ಹಸೈನಾರ್, ರಮಾನಾಥ್, ರೂಪಾ ಭೀಮಯ್ಯ, ಟಾಟು ಮೊಣ್ಣಪ್ಪ, ಪಿ.ಜಿ. ಅಯ್ಯಪ್ಪ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಅಬ್ದುಲ್ ಸಲಾಂ ಸೇರಿದಂತೆ ವಿವಿಧ ಘಟಕಗಳ ಮುಂಚೂಣಿ ನಾಯಕರುಗಳು, ಪದಾಧಿಕಾರಿಗಳು, ಮುಖಂಡರುಗಳು, ಕಾರ್ಯಕರ್ತರು ಹಾಜರಿದ್ದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಕಾವೇರಿ ಕಾಲೇಜಿನ ಬಳಿಯಿಂದ ಪಂಜರಪೇಟೆ, ಸರಕಾರಿ ಬಸ್ ನಿಲ್ದಾಣದ ರಸ್ತೆ, ದೊಡ್ಟಟ್ಟಿ ಚೌಕಿ, ಎಫ್.ಎಂ.ಸಿ ರಸ್ತೆ ಮೂಲಕ ಕಾರು ನಿಲ್ದಾಣದವರೆಗೆ ಪಕ್ಷದ ಪ್ರಮುಖರು ಹಾಗೂ ಕಾಯರ್ಯಕರ್ತರು ಕೇಂದ್ರ ಸರಕಾರದ ನಿರ್ಧಾರವನ್ನು ಖಂಡಿಸಿ ಪಾದಯಾತ್ರೆ ನಡೆಸಿದರು. ಪಾದಯಾತ್ರೆಯುದ್ದಕ್ಕೂ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಮನರೇಗಾ ಯೋಜನೆಯ ಜಾರಿಗೆ ಒತ್ತಾಯಿಸಿದರು.