ಕುಶಾಲನಗರ, ಫೆ. ೧೬: ಭಾನುವಾರ ಜಿಲ್ಲೆಗೆ ಭೇಟಿ ನೀಡಿದ ಗೃಹ ಮಂತ್ರಿ ಪರಮೇಶ್ವರ್ ಅವರನ್ನು ಜಿಲ್ಲೆಯ ಗಡಿಭಾಗ ಕುಶಾಲನಗರ ಪಟ್ಟಣದಲ್ಲಿ ನಗರ ಮತ್ತು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಸೇರಿದ ಕಾರ್ಯಕರ್ತರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ. ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಮಹಿಳಾ ಕಾಂಗ್ರೆಸ್ ಪ್ರಮುಖರು ಪರಮೇಶ್ವರ್ ಅವರಿಗೆ ಹಾರ ಹಾಕುವ ಮೂಲಕ ಬರಮಾಡಿಕೊಂಡರು. ರಸ್ತೆಯ ಎರಡು ಬದಿಗಳಲ್ಲಿ ಎರಡು ಬೃಹತ್ ಜೆಸಿಬಿ ಯಂತ್ರಗಳನ್ನು ಬಳಸಿಕೊಂಡು ಕಾರ್ಯಕರ್ತರು ಸಚಿವರ ಮೇಲೆ ಹೂಮಳೆ ಸುರಿಸಿದರು.

ಈ ಸಂದರ್ಭ ಶಾಸಕ ಡಾ ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಕೆ.ಪಿ. ಚಂದ್ರಕಲಾ, ಮಂಜುನಾಥ ಗುಂಡುರಾವ್, ಪುಷ್ಪಲತಾ, ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.