ಮಡಿಕೇರಿ, ಫೆ. ೧೬: ಕೊಡಗಿನಲ್ಲಿ ಶಾಖೆಗಳನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಮೂರ್ನಾಡಿನಲ್ಲಿ ಉದ್ಘಾಟನೆಗೊಂಡಿತು. ಈ ಶಾಖೆಯ ಉದ್ಘಾಟನೆಯನ್ನು ವೀರಾಜಪೇಟೆ ವಿಧಾನಸಭಾ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನೆರವೇರಿಸಿದರು.
ಗ್ರಾಮೀಣ ಭಾಗದ ಜನರಿಗೆ ಅದರಲ್ಲೂ ವಿಶೇಷವಾಗಿ ರೈತರಿಗೆ ಹಾಗೂ ಸಣ್ಣ ವ್ಯಾಪಾರಸ್ಥರಿಗೆ ಕೋ ಆಪರೇಟಿವ್ ಸೊಸೈಟಿಗಳು ಪ್ರಾಮುಖ್ಯತೆ ನೀಡುತ್ತಿವೆ. ಇಂತಹ ಸೊಸೈಟಿಗಳು ಜನಸಾಮಾನ್ಯರ ಒಳಿತನ್ನು ದೃಷ್ಟಿಯಲ್ಲಿಟ್ಟುಕೊಂಡು ತಮ್ಮ ಸಂಸ್ಥೆಯ ಬೆಳವಣಿಗೆಗೆ ಪೂರಕವಾದಂತಹ ನೀತಿಗಳನ್ನು ರೂಪಿಸಿ ಜನಮನ್ನಣೆ ಗಳಿಸುವಂತಾಗಬೇಕು ಎಂದು ಹೇಳಿದರು. ಮುಖ್ಯ ಅತಿಥಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿ, ಈ ಸಹಕಾರ ಸಂಘದ ಆಡಳಿತ ಮಂಡಳಿಯು ಸಮಾಜದಲ್ಲಿ ಉತ್ತಮ ಕಾರ್ಯದ ಮುಖೇನ ಜನಪ್ರಿಯವಾಗಿದೆ ಎಂದು ಹೇಳಿದರು.
ಗಣಕೀಕರಣವನ್ನು ಮೂರ್ನಾಡು ವರ್ತಕರ ಸಂಘದ ಅಧ್ಯಕ್ಷ ಅರುಣ್ ಅಪ್ಪಚ್ಚು ಬಡುವಂಡ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯು ಯಶಸ್ಸನ್ನು ಕಾಣಲಿ ಎಂದು ಹಾರೈಸಿದರು.
ಶಾಖೆಯ ಪ್ರಥಮ ಠೇವಣಿ ಪತ್ರವನ್ನು ಕೊಡಗು ಚೇಂಬರ್ ಆಫ್ ಕಾಮರ್ಸ್ನ ಉಪಾಧ್ಯಕ್ಷ ನವೀನ್ ಅಂಬೆಕಲ್ಲು ವಿತರಿಸಿ ಮಾತನಾಡಿ ಸಂಸ್ಥೆಯು ಗ್ರಾಹÀಕರಿಗೆ ಉತ್ತಮವಾದ ಸೇವೆಯನ್ನು ನೀಡುತ್ತಿದ್ದು ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕೆಂದರು. ಪ್ರಥಮ ಪಾಲು ಪತ್ರವನ್ನು ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ ಹರೀಶ್ ವಿತರಿಸಿದರು.
ಸಭೆಯಲ್ಲಿ ವೆಂಕಟೇಶ್ವರ ಕಾಂಪ್ಲೆಕ್ಸ್ ಮಾಲೀಕರಾದ ಕುಂತೋಡಿರ ದೇವಯ್ಯ ಹಾಗೂ ಉದ್ಯಮಿ ವಾಸುದೇವ ಪಟ್ರಕೋಡಿ ಅವರನ್ನು ಗೌರವಿಸಲಾಯಿತು.
ಸಂಘದ ನಿರ್ದೇಶಕ ಸದಾನಂದ ಮಾವಾಜಿ ಸ್ವಾಗತಿಸಿ, ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ ಪ್ರಾಸ್ತಾವಿಕ ನುಡಿಯಾಡಿದರು. ಸಿಬ್ಬಂದಿಗಳಾದ ಗಿರೀಶ್ಕಾಂತ್ ಪರಪ್ಪು ಹಾಗೂ ಆದರ್ಶ ಪ್ರಾರ್ಥಿಸಿದರು. ಕೃಷ್ಣಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ ವಿಶ್ವನಾಥ ವಂದಿಸಿದರು.
ಸೊಸೈಟಿಯ ಸದಸ್ಯರಾದ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್ ಗಂಗಾಧರ, ಸೊಸೈಟಿಯ ಪೂರ್ವಾಧ್ಯಕ್ಷರುಗಳಾದ ಪಿ.ಸಿ ಜಯರಾಮ, ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಚಂದ್ರ ಕೋಲ್ಚಾರ್, ದೊಡ್ಡಣ್ಣ ಬರೆಮೇಲು, ಪ್ರೇಮ ಲೋಕೇಶ್, ಡಾ. ಎನ್.ಎ. ಜ್ಞಾನೇಶ್, ಲಕ್ಷೀ ನಾರಾಯಣ ನಡ್ಕ, ಮೋಹನ್ ರಾಂ ಸುಳ್ಳಿ, ದಾಮೋದರ ನಾರ್ಕೋಡು, ಪಿ.ಎಸ್. ಗಂಗಾಧರ, ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಮೇರ್ಕಜೆ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಭೆಯಲ್ಲಿ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಕಾಂತೂರು-ಮೂರ್ನಾಡು ಪಂಚಾಯಿತಿ ಅಧ್ಯಕ್ಷ ಕುಶನ್ ರೈ, ಮುಕ್ಕಾಟೀರ ಸಂದೀಪ್, ಅಪ್ರು ರವೀಂದ್ರ ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.