ಕೂಡಿಗೆ, ಫೆ. ೧೬: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಗ್ರಾಮದಲ್ಲಿ ಹಿಂದೂ ರುದ್ರಭೂಮಿಗೆ ಕಾಯಕಲ್ಪ ದೊರಕಿದೆ.
ಈ ಕುರಿತು ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಹಾರಂಗಿ ಗ್ರಾಮದ ರುದ್ರಭೂಮಿಯಲ್ಲಿ ಮಳೆಗಾಲದಲ್ಲಿ ಶವಸಂಸ್ಕಾರ ಮಾಡಲು ಸರಿಯಾದ ವ್ಯವಸ್ಥೆ ಇಲ್ಲದೆ ಪರದಾಡುವಂತ ಸ್ಥಿತಿ ಎದುರಾಗಿತ್ತು. ಬೇಸಿಗೆ ಸಂದರ್ಭ ಶವಸಂಸ್ಕಾರ ಮಾಡಲು ಹೆಚ್ಚಾಗಿ ಮರದ ಕಟ್ಟಿಗೆಗಳು ಬೇಕಾಗಿರುವುದರಿಂದ ಸಮಸ್ಯೆ ಉಂಟಾಗಿದ್ದು ಇದನ್ನು ಮನಗಂಡು ಗ್ರಾಮ ಪಂಚಾಯಿತಿ ಅನುದಾನದಲ್ಲಿ ಸುಮಾರು ರೂ. ೬ ಲಕ್ಷ ವೆಚ್ಚದಲ್ಲಿ ಹಂತಹAತವಾಗಿ ಸುಸಜ್ಜಿತ ಕಟ್ಟಡವನ್ನು ನಿರ್ಮಾಣ ಮಾಡಲಾಯಿತು. ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘಕ್ಕೆ ಮನವಿ ಮಾಡಿ ಸಂಘದ ಮುಖಾಂತರ ರೂ.೨ ಲಕ್ಷ ಮೌಲ್ಯದ ಶವಸುಡುವ ಚೇಂಬರ್ ಅಳವಡಿಕೆ ಮಾಡಲಾಗಿದ್ದು, ಅಗತ್ಯ ಸೌಲಭ್ಯಗಳು ಒಳಗೊಂಡ ಸ್ಮಶಾನ ಬಳಕೆಗೆ ಮುಕ್ತವಾಗಿದೆ ಎಂದು ಮಾಹಿತಿ ನೀಡಿದರು.