ಮಡಿಕೇರಿ, ಫೆ. ೧೭; ಮಡಿಕೇರಿ ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಯೋಜನೆಯಾದ ಅಮೃತ್-೨ ಕಾಮಗಾರಿಯಿಂದಾಗಿ ಜನತೆಗೆ ಸಮಸ್ಯೆಯಾಗುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸುವದಾಗಿ ಮಡಿಕೇರಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು; ಅಮೃತ್-೨ ಕಾಮಗಾರಿಯಿಂದಾಗಿ ನಗರ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ರಸ್ತೆಗಳನ್ನು ಕೊರೆದು ಪೈಪ್‌ಗಳನ್ನು ಅಳವಡಿಸಲಾಗುತ್ತಿದ್ದು, ನಂತರದಲ್ಲಿ ಗುಂಡಿಗಳನ್ನು ಸರಿಯಾಗಿ ಮುಚ್ಚದೇ ಇರುವದರಿಂದ ಸಮಸ್ಯೆಯಾಗುತ್ತಿದೆ. ನಗರ ಪೂರ್ತಿ ಧೂಳಿನಿಂದ ಆವೃತ್ತವಾಗಿದ್ದು ಸಂಚರಿಸಲು ಕಷ್ಟವಾಗುತ್ತಿದೆ. ಇನ್ನು ಮಳೆ ಆರಂಭವಾಗಲಿದ್ದು, ಮತ್ತಷ್ಟು ಸಮಸ್ಯೆ ತಲೆದೋರಲಿದೆ. ಅದೂ ಅಲ್ಲದೆ ಕಾಮಗಾರಿ ನಡೆಸುವ ಸಂದರ್ಭ ಕುಡಿಯುವ ನೀರಿನ ಸಂಪರ್ಕದ ಪೈಪ್‌ಗಳನ್ನು ಕೂಡ ತುಂಡರಿಸುತ್ತಿದ್ದು, ಮತ್ತೆ ಮರು ಜೋಡಣೆ ಮಾಡದೇ ಹಾಗೇ ಬಿಟ್ಟು ಹೋಗುತ್ತಿದ್ದಾರೆ. ಇದರಿಂದ ನಾಗರಿಕರಿಗೆ ಕುಡಿಯುವ ನೀರಿಗೂ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ವಿಚಾರಿಸಲು ಸಂಬAಧಿಸಿದ ಯೋಜನೆಯ ಅಧಿಕಾರಿಗಳಾಗಲೀ, ಗುತ್ತಿಗೆದಾರರಾಗಲೀ ಸಂಪರ್ಕಕ್ಕೆ ಸಿಗುತ್ತಿಲ್ಲ. ಹಾಗಾಗಿ ಸರಿಯಾದ ರೀತಿಯಲ್ಲಿ ಕಾಮಗಾರಿ ನಿರ್ವಹಿಸುವಂತೆ ಸಂಬAಧಿಸಿದವರಿಗೆ ಸೂಚನೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸುವದಾಗಿ ಹೇಳಿದ್ದಾರೆ.