ಶನಿವಾರಸಂತೆ, ಫೆ. ೧೭: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶನಿವಾರಸಂತೆ-ಕೊಡ್ಲಿಪೇಟೆ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು, ಗ್ರಾಮ ಪಂಚಾಯಿತಿ ಹಂಡ್ಲಿ ಹುಲುಸೆ ಕೆರೆ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ನಡೆಯುವ ೮೬೫ನೇ ಮತ್ತು ನಮ್ಮೂರು ನಮ್ಮ ಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ ತಾ.೧೮ ರಂದು ಮಧ್ಯಾಹ್ನ ೨ ಗಂಟೆಗೆ ಹುಲುಸೆ ಕೆರೆ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಶಾಸಕರಾದ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಶ್ರೀಕ್ಷೇತ್ರ ಕಿರಿಕೊಡ್ಲಿಮಠದ ಸದಾಶಿವ ಸ್ವಾಮೀಜಿ ಕೆರೆಗೆ ಬಾಗಿನ ಅರ್ಪಿಸಲಿದ್ದಾರೆ.
ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಭರತ್ ಹುಲುಸೆ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕಿ ಲೀಲಾವತಿ, ಹಂಡ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಜನಾದೇವಿ, ಉಪಾಧ್ಯಕ್ಷ ಎಚ್.ಎಸ್. ಅಶೋಕ್, ಸದಸ್ಯ ವೀರೇಂದ್ರ ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.