ಬೆಂಗಳೂರು, ಫೆ. ೧೭: ತಾ. ೨೮ರಿಂದ ಮಾರ್ಚ್ ೧೭ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ ೧೮ ರಿಂದ ಏಪ್ರಿಲ್ ೨ ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.
ಬೆಂಗಳೂರಿನಲ್ಲಿAದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ತಾ.೨೮ ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. ೧೮ ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧ ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧.೧೫ ಗಂಟೆವರೆಗೆ ನಡೆಯಲಿದೆ ಎಂದು ತಿಳಿಸಿದರು.
ಮಾರ್ಚ್ ೧೮ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧.೧೫ರವರೆಗೆ ನಡೆಯಲಿವೆ. ಪರೀಕ್ಷೆಗೆ ನೋಂದಾಯಿಸಿಕೊAಡ ವಿದ್ಯಾರ್ಥಿಗಳ ಸಂಖ್ಯೆ ೯,೦೨,೮೮೯. ಹೊಸಬರು ೮,೧೨,೮೫೫, ಪುನರಾವರ್ತಿತ ೬೨,೮೪೫ ವಿದ್ಯಾರ್ಥಿಗಳು. ೨೭,೧೮೯ ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ ೨೮೭೧. ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು ೭,೧೦,೩೬೩ ವಿದ್ಯಾರ್ಥಿಗಳು ನೋಂದಾಯಿಸಿಕೊAಡಿದ್ದು, ಪೈಕಿ ೬,೪೬,೮೦೧ ಹೊಸಬರು, ೫೦,೫೪೦ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ೧೩,೦೨೨ ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು ೧೨೧೭ ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ ೭ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.