ಕುಶಾಲನಗರ, ಫೆ ೧೭: ಮುಳ್ಳುಸೋಗೆ ಗ್ರಾಮದ ಕನ್ನಂಬಾಡಿ ಅಮ್ಮನವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ತಾ. ೧೮ ರಿಂದ (ಇಂದಿನಿAದ) ಮೂರು ದಿನಗಳ ಕಾಲ ನಡೆಯಲಿದೆ ಎಂದು ಕನ್ನಂಬಾಡಿ ಅಮ್ಮನವರ ಮತ್ತು ಮಾರಮ್ಮ ದೇವಸ್ಥಾನ ಸೇವಾ ಸಮಿತಿ ಉಪಾಧ್ಯಕ್ಷ ಎಂ.ಆರ್.ನAಜುAಡ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. ೧೮ ರಂದು ಮುಖ್ಯದ್ವಾರ ಪೂಜೆ, ತಾ. ೧೯ ರಂದು ದಾನಿಗಳಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ತಾ. ೨೦ ರಂದು ಕಾವೇರಿ ನದಿಯಲ್ಲಿ ಗಂಗಾಪೂಜೆ ನೆರವೇರಿಸಿ ಕಳಶ ಮೆರವಣಿಗೆ, ಬ್ರಹ್ಮ ಕಲಶಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ನಡೆಯಲಿದೆ. ೨೦ ರಂದು ಆದಿಚುಂಚನಗಿರಿ ಮಠದ ಹಾಸನ-ಕೊಡಗು ಶಾಖೆಯ ಶ್ರೀ ಶಂಭುನಾಥ ಸ್ವಾಮೀಜಿ, ವೀರಾಜಪೇಟೆಯ ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಮಿತಿ ಅಧ್ಯಕ್ಷ ಎಂ.ಎಚ್. ಅಣ್ಣೇಗೌಡ ಮಾತನಾಡಿ, ದಾನಿಗಳು, ಗ್ರಾಮಸ್ಥರ ಸಹಕಾರದಿಂದ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಗ್ರಾಮಸ್ಥರಾದ ಎಂ.ಸಿ. ಅನಿಲ್ ಮಾತನಾಡಿ, ಮೂರು ದಿನಗಳ ಪೂಜೋತ್ಸವದಲ್ಲಿ ಗ್ರಾಮಸ್ಥರು ಮತ್ತು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಗೋಷ್ಠಿಯಲ್ಲಿ ಸಮಿತಿಯ ಕಾರ್ಯದರ್ಶಿ ಆರ್. ಪ್ರವೀಣ್, ಖಜಾಂಚಿ ಎಂ.ವಿ.ದಾಸೇಗೌಡ, ನಿರ್ದೇಶಕ ಎಂ.ಟಿ. ರಘು ಇದ್ದರು.