ಮಡಿಕೇರಿ, ಫೆ. ೧೭: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ತಾ. ೨೮ ರಿಂದ ಮಾರ್ಚ್ ೧೭ ರವರೆಗೆ ನಡೆಯಲಿದ್ದು., ಪರೀಕ್ಷೆಯನ್ನು ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಸಂಬAಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಾವುದೇ ಗೊಂದಲ ಉಂಟಾಗದAತೆ ನಡೆಸಬೇಕು. ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ, ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸಬೇಕು.
ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ಪರೀಕ್ಷಾ ಪಾವಿತ್ರö್ಯತೆಯನ್ನು ಕಾಪಾಡಬೇಕು.
ಪರೀಕ್ಷಾ ಕೇಂದ್ರಗಳ ಚಲನವಲನ ಸಂಬAಧಿಸಿದAತೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆ ಖಾತರಿ ಪಡಿಸಿಕೊಳ್ಳಲು ಪರೀಕ್ಷಾ ಕೇಂದ್ರದ ನಾಲ್ಕೆöÊದು ಕಡೆಗಳಲ್ಲಿ ಮಾಹಿತಿ ಒದಗಿಸುವಂತಾಗಬೇಕು.
ಪರೀಕ್ಷಾ ದಿನಗಳಲ್ಲಿ ಅಗತ್ಯ ವಾಹನ ನಿಯೋಜಿಸಬೇಕು. ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದAತೆ ನೋಡಿಕೊಳ್ಳಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಮಾತನಾಡಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಕಳೆದ ಬಾರಿಯಂತೆ ಸುಗಮವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪದವಿಪೂರ್ವ ಶಿಕ್ಷಣ, ಕಂದಾಯ, ಪೊಲೀಸ್, ಖಜಾನೆ, ಸಾರಿಗೆ, ಸೆಸ್ಕ್, ಆರೋಗ್ಯ ಹೀಗೆ ವಿವಿಧ ಇಲಾಖೆಗಳು ತಂಡವಾಗಿ ಕಾರ್ಯನಿರ್ವಹಿಸಲಿವೆ ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಿಜಯ್ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ೫೨೫೫ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದು, ಮೊದಲ ಬಾರಿಗೆ ೪,೮೦೯ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ೨೫೦ ಖಾಸಗಿ ಹಾಗೂ ೧೯೬ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಲಾ ವಿಭಾಗದಲ್ಲಿ ೧,೦೫೪ ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ೨೬೦೩ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ೧೫೯೮ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕ ಜಾರಿಗೊಳಿಸಬೇಕಿದೆ. ಹಾಗೆಯೇ ಪರೀಕ್ಷಾ ದಿನಗಳಂದು ಜೆರಾಕ್ಸ್ ಅಂಗಡಿಗಳನ್ನು ಸಹ ಮುಚ್ಚಿಸಲಾಗುತ್ತದೆ ಎಂದರು.
ಜಿಲ್ಲೆಯ ೧೮ ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ, ಮಡಿಕೇರಿ ತಾಲೂಕಿನ ೫, ಸೋಮವಾರಪೇಟೆ ತಾಲೂಕಿನ ೮ ಮತ್ತು ವೀರಾಜಪೇಟೆ ತಾಲೂಕಿನ ೫ ಕಡೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದರು.
ಪರೀಕ್ಷಾ ಕೇಂದ್ರಗಳ ವಿವರ: ಮಡಿಕೇರಿ ತಾಲೂಕಿನ ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜು, ಸಂತ ಮೈಕಲರ ಪದವಿಪೂರ್ವ ಕಾಲೇಜು, ನಾಪೋಕ್ಲು ಸರ್ಕಾರಿ ಪದವಿಪೂರ್ವ ಕಾಲೇಜು, ಮೂರ್ನಾಡು ಪದವಿಪೂರ್ವ ಕಾಲೇಜು, ಚೇರಂಬಾಣೆ ಅರುಣ ಪದವಿಪೂರ್ವ ಕಾಲೇಜು.
ಸೋಮವಾರಪೇಟೆ ತಾಲೂಕಿನ ಸೋಮವಾರಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು, ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ ಹಾಗೂ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ನೆಲ್ಲಿಹುದಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜುಗಳು, ಕೊಡ್ಲಿಪೇಟೆ ಮತ್ತು ಶನಿವಾರಸಂತೆ ಪದವಿಪೂರ್ವ ಕಾಲೇಜು ಹಾಗೂ ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.
ವೀರಾಜಪೇಟೆ ತಾಲೂಕಿನಲ್ಲಿ ವೀರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು. ಸಂತ ಅನ್ನಮ್ಮ ಪದವಿಪೂರ್ವ ಕಾಲೇಜು, ವೀರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜು, ಪೊನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು, ಗೋಣಿಕೊಪ್ಪ ವಿದ್ಯಾನಿಕೇತನ ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು.
ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜೆ. ದಿವಾಕರ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸಿದ್ಧರಾಜು ಬೆಳ್ಳಯ್ಯ, ಹಂಡ್ರAಗಿ ನಾಗರಾಜು ಅವರು ಮಾತನಾಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ತಹಶೀಲ್ದಾರ್‌ಗಳಾದ ಶ್ರೀಧರ, ಕಿರಣ್ ಗೌರಯ್ಯ, ಪೊಲೀಸ್ ಇನ್ಸ್ಪೆಕ್ಟರ್ ರಾಜು, ವಿವಿಧ ಕಾಲೇಜಿನ ಪ್ರಾಂಶುಪಾಲರು, ಮೇಲ್ವಿಚಾರಕರು ಇತರರು ಇದ್ದರು.