ಮಡಿಕೇರಿ, ಫೆ. ೧೯: ಜಿಲ್ಲೆಯಲ್ಲಿ ತಾ. ೧೭ ರಿಂದ ಏಪ್ರಿಲ್ ೧೧ ರವರೆಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ವತಿಯಿಂದ ೧೦ ಮತ್ತು ೧೨ನೇ ತರಗತಿಗಳ ಪರೀಕ್ಷೆ ನಡೆಯಲಿದ್ದು, ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶಿಸಿದ್ದಾರೆ. ಈ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್ಗಳನ್ನು ಮುಚ್ಚಬೇಕು. ಈ ಆದೇಶವು ಪರೀಕ್ಷಾ ದಿನಗಳಂದು ಬೆಳಿಗ್ಗೆ ೯ ಗಂಟೆಯಿAದ ಅಪರಾಹ್ನ ೫.೩೦ ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಮಡಿಕೇರಿಯ ಕೊಡಗು ವಿದ್ಯಾಲಯ, ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ, ಸೈನಿಕ ಶಾಲೆ, ಕೇಂದ್ರೀಯ ವಿದ್ಯಾಲಯಗಳಲ್ಲಿ ಪರೀಕ್ಷೆ ನಡೆಯಲಿದೆ.