ಮಡಿಕೇರಿ, ಫೆ. ೧೯: ವಿಶ್ವಸಂಸ್ಥೆಯ ಅಂತರರಾಷ್ಟಿçÃಯ ಮಾತೃಭಾಷಾ ದಿನಾಚರಣೆ ಅಂಗವಾಗಿ ತಾ. ೨೧ ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು "ಕೊಡವ ಸತ್ಯಾಗ್ರಹ" ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.
ಬೆಳಿಗ್ಗೆ ೧೦.೩೦ಕ್ಕೆ ಶಾಂತಿಯುತವಾಗಿ ಸತ್ಯಾಗ್ರಹ ನಡೆಸಿ ಪ್ರಖ್ಯಾತ ಭಾಷಾ ತಜ್ಞ ಪಂಡಿತ್ ಡಾ. ಸೀತಕಾಂತ್ ಮಹಾಪಾತ್ರ ಆಯೋಗದ ವರದಿಯ ಶಿಫಾರಸ್ಸಿನಂತೆ ಕೊಡವ ತಕ್ ಭಾಷೆಯನ್ನು ಸಂವಿಧಾನದ ೮ನೇ ಶೆಡ್ಯೂಲ್ಗೆ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.