ಕುಶಾಲನಗರ, ಫೆ. ೨೦: ಕುಶಾಲನಗರ ಪುರಸಭೆಯ ೨೦೨೬ -೨೭ನೇ ಸಾಲಿನ ಅಂದಾಜು ಆಯವ್ಯಯ ಮಂಡಿಸಲಾಗಿದ್ದು, ರೂ ೧೫.೩೮ ಲಕ್ಷ ಆದಾಯವನ್ನು ನಿರೀಕ್ಷಿಸಲಾಗಿದೆ.

ಕುಶಾಲನಗರದ ಪುರಸಭೆ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿ ಹಾಗೂ ಪುರಸಭೆಯ ಆಡಳಿತ ಅಧಿಕಾರಿ ಆಗಿರುವ ನಿತಿನ್ ಚಕ್ಕಿ ಅವರ ಸಮ್ಮುಖದಲ್ಲಿ ಮುಖ್ಯ ಅಧಿಕಾರಿ ಟಿ.ಎಸ್. ಗಿರೀಶ್ ಬಜೆಟ್ ಮಂಡಿಸಿದರು.

೨೦೨೬-೨೭ನೇ ಸಾಲಿಗೆ ಅಂದಾಜು ಆದಾಯ ೩೧ ಕೋಟಿ ೪೪ ಲಕ್ಷ ೩೯ ಸಾವಿರ ನಿರೀಕ್ಷಿಸಲಾಗಿದ್ದು, ೩೧ಕೋಟಿ ೨೮ ಲಕ್ಷದ ೯೧ ಸಾವಿರ ರೂಪಾಯಿ ನಿರೀಕ್ಷಿತ ಖರ್ಚು ಎಂದು ಅಂದಾಜಿಸಲಾಗಿದೆ.

ಈ ಸಂದರ್ಭ ಮಾತನಾಡಿದ ಆಡಳಿತ ಅಧಿಕಾರಿ ನಿತಿನ್ ಚಕ್ಕಿ, ಪುರಸಭೆಗೆ ಸಂಬAಧಿಸಿದ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಪುರಸಭೆ ವ್ಯಾಪ್ತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಫುಡ್ ಕೋರ್ಟ್ ನಿರ್ಮಾಣ ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆಗೆ ಸಿಸಿಟಿವಿ ಅಳವಡಿಸಲು ಅನುದಾನ ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.

ಪಟ್ಟಣದ ಮುಖ್ಯರಸ್ತೆಯ ಎಲ್ಲಾ ವೃತ್ತಗಳ ಅಭಿವೃದ್ಧಿ ಮತ್ತು ಫೀ.ಮಾ. ಕೆ.ಎಂ. ಕಾರ್ಯಪ್ಪ ಸರ್ಕಲ್‌ನಲ್ಲಿ ಪ್ರತಿಮೆ ಹಾಗೂ ಗುಂಡೂರಾವ್ ಪ್ರತಿಮೆ ಸ್ಥಾಪನೆಗೆ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಲಾಗಿದೆ ಎಂದು ಹೇಳಿದರು. ಪುರಸಭೆಯ ಎಲ್ಲಾ ಪೌರ ಕಾರ್ಮಿಕರಿಗೆ ಅಪಘಾತ ವಿಮೆ ಮಾಡಿಸಲು ಬಜೆಟ್‌ಲ್ಲಿ ಹಣ ಮೀಸಲಿಡಲಾಗಿದೆ ಎಂದು ವಿವರಿಸಿದರು.

ಬೀದಿನಾಯಿಗಳ ಸಂತಾನ ಹರಣ ಶಸ್ತçಚಿಕಿತ್ಸೆಗಾಗಿ ರೂ. ೧೦ ಲಕ್ಷ ಕಾಯ್ದಿರಿಸಲಾಗಿದೆ. ಕುಶಾಲನಗರ ಪುರಸಭೆ ವ್ಯಾಪ್ತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಮಹಿಳೆಯರ ಅನುಕೂಲಕ್ಕಾಗಿ ಸ್ಯಾನಿಟರಿ ಪ್ಯಾಡ್ ವೆಂಡಿAಗ್ ಯಂತ್ರ ಅಳವಡಿಸುವ ಬಗ್ಗೆ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು.

ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮಾತನಾಡಿ, ಈ ಬಾರಿಯ ಬಜೆಟ್‌ನಲ್ಲಿ ಕಂದಾಯ ಕ್ರೋಢೀಕರಣಕ್ಕೆ ಆದ್ಯತೆ ಕಲ್ಪಿಸಲಾಗಿದೆ ಎಂದರಲ್ಲದೆ, ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ಹಿರಿಯ ಆರೋಗ್ಯ ಅಧಿಕಾರಿ ಉದಯಕುಮಾರ್, ಕಂದಾಯ ಅಧಿಕಾರಿ ರಾಮು, ಲೆಕ್ಕಾಧಿಕಾರಿ ಯಶವಂತ್, ಕಂದಾಯ ನಿರೀಕ್ಷಕರಾದ ಧನಂಜಯ ಮತ್ತು ಸಿಬ್ಬಂದಿಗಳು ಇದ್ದರು.