ಮಡಿಕೇರಿ, ಫೆ. ೨೦: ಚೆಟ್ಟಳ್ಳಿಯ ವಿರಾಟ್ ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ತಾ. ೨೨ ರಂದು ಚೆಟ್ಟಳ್ಳಿಯಲ್ಲಿ ಬೃಹತ್ ವಿರಾಟ್ ಹಿಂದೂ ಸಂಗಮವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಸಂಯೋಜಕ ಪೇರಿಯನ ಉದಯ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ ೨ ಗಂಟೆಗೆ ವ್ಯಾಲಿ ಪ್ಲೇ ಶಾಲೆ ಮುಂಭಾಗದಿAದ ಚೆಟ್ಟಳ್ಳಿ ಪ್ರೌಢಶಾಲಾ ಆಟದ ಮೈದಾನದವರೆಗೆ ಬೃಹತ್ ಶೋಭಾಯಾತ್ರೆ ಸಾಗಲಿದೆ. ಶೋಭಾಯಾತ್ರೆಯಲ್ಲಿ ಶ್ರೀ ಮೂಕಾಂಬಿಕ ಭಜನೆ ಕುಣಿತ ತಂಡ ನೆಲ್ಲಿಹುದಿಕೇರಿ, ಪೂರ್ಣ ಕುಂಭ ಸ್ವಾಗತ, ಉಡೋತ್ಮೊಟ್ಟೆ ತಂಡದವರಿAದ ಭಜನೆ ಕುಣಿತ, ಬೆಳ್ಳಿ ರಥದ ಮೆರವಣಿಗೆ, ಶ್ರೀ ಶಬರೀಶ ಚಂಡೆಮೇಳ ತಂಡ ಚೆಟ್ಟಳ್ಳಿ, ಹುಲಿವೇಷ ಪುತ್ತೂರು, ಬಾಳೆಗುಂಡಿ ತಂಡದಿAದ ಹಾಡಿ ಕುಣಿತ ಮತ್ತು ಶ್ರೀ ಶೆಟ್ಟಿ ಆರ್ಟ್ಸ್ ಗೊಂಬೆ ಬಳಗ ಬೆಳ್ತಂಗಡಿ ಹಾಗೂ ಇತರ ಆಕರ್ಷಕ ಕಾರ್ಯಕ್ರಮ ಜರುಗಲಿದೆ ಎಂದರು.

ಸಂಜೆ ೫ ಗಂಟೆಗೆ ಚೆಟ್ಟಳ್ಳಿಯ ಪ್ರೌಢಶಾಲಾ ಆಟದ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕಾಫಿ ಬೆಳೆಗಾರರಾದ ಕೊಂಗೇಟಿರ ವೀಣಾ ಅಪ್ಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ರಾಷ್ಟಿçÃಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗದ ಕಾರ್ಯವಾಹ ವಾದಿರಾಜ್ ಉಡುಪಿ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಗೌಡ ಸಮಾಜದ ನಿಕಟಪೂರ್ವ ಅಧ್ಯಕ್ಷ ಪೇರಿಯನ ಜಯಾನಂದ, ನಿವೃತ್ತ ಬ್ಯಾಂಕ್ ಅಧಿಕಾರಿ ಎಂ.ಎಸ್.ತಿರುಮಲೇಶ್ವರ ಭಟ್ ಹಾಗೂ ಚೆಟ್ಟಳ್ಳಿ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷೆ ಪಿ.ಕೆ. ಲೀಲಾ ಪಾಲ್ಗೊಳ್ಳಲಿದ್ದಾರೆ.

ಮೊದಲಿಗೆ ವಂದೇಮಾತರA, ನಂತರ ಜ್ಯೋತಿ ಬೆಳಗುವುದರ ಮೂಲಕ ಭಾರತಮಾತೆಗೆ ಪುಷ್ಪಾರ್ಚನೆ, ದಿಕ್ಸೂಚಿ ಭಾಷಣ, ಅತಿಥಿಗಳ ಭಾಷಣ ಹಾಗೂ ಅಧ್ಯಕ್ಷರ ಭಾಷಣ ನೆರವೇರಲಿದೆ ಎಂದು ತಿಳಿಸಿದರು.

ಹಿಂದೂ ಸಂಗಮದ ಧೈಯೋದ್ದೇಶಗಳು

ಹಿಂದೂ ಸಂಗಮವು ಕೇವಲ ಒಂದು ಧಾರ್ಮಿಕ ಉತ್ಸವವಲ್ಲ, ಅದು ಸಮಾಜದ ಏಕತೆ, ಸಂಸ್ಕೃತಿಯ ಉಳಿವು ಮತ್ತು ಧಾರ್ಮಿಕ ಜಾಗೃತಿಯ ಪ್ರತೀಕವಾಗಿದೆ. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಧಾರ್ಮಿಕ ಭಾವನೆ, ಶಾಂತಿ ಮತ್ತು ಸಹಕಾರವನ್ನು ಬೆಳೆಸುತ್ತದೆ. ವಿಶಾಲ ಜನಜಾಗೃತಿ ಸಭೆ ಸಮಾಜರೂಪಿ ಭಗವಂತನ ವಿಶ್ವರೂಪ ದರ್ಶನ. ಹಿಂದುಗಳೆಲ್ಲ ನಾವು ಸೋದರರೆಂಬ ಭಾವದ ಅಭಿವ್ಯಕ್ತ ರೂಪ. ಸಾವಿರ ಸಾವಿರ ಸಂಖ್ಯೆಯಲ್ಲಿ ಸೇರುವ ಹಿಂದು ಜನಸಾಗರ. ಭಾಷೆ, ವೇಷ, ಪ್ರಾಂತ, ಪಂಥ, ಎಲ್ಲಾ ವಿಧಿ ವೈವಿಧ್ಯಗಳ ನಡುವೆ ಏಕತೆ ಮತ್ತು ಸಾಮರಸ್ಯ ಸಾರುವ ಜನಸ್ತೋಮ. ಸ್ವಂತಕ್ಕೆ ಸ್ವಲ್ಪ - ಸಮಾಜಕ್ಕೆ ಸರ್ವಸ್ವ ಎಂಬ ಸಂದೇಶ ಸಾರುವ ಸಮಾವೇಶ ಇದಾಗಿದೆ.

ದೇಶಭಕ್ತರ ದನಿಗೂಡಿಸಿ ದೇಶದ್ರೋಹಿಗಳ ದನಿ ಅಡಗಿಸಲು, ಮೇಲುಕೀಳುಗಳ ಭಾವ ಅಳಿಸಿ ಹಾಕಲು, ಭಯೋತ್ಪಾದನೆ, ಮತಾಂತರ, ಗೋಹತ್ಯೆಗಳನ್ನು ನಿಲ್ಲಿಸಲು, ಹಿಂದು ಶಕ್ತಿಯ ಅರಿವು ಮೂಡಿಸಲು, ನೊಂದ ಬಾಂಧವರ ನೋವಿಗೆ ಸ್ಪಂದಿಸಲು ಈ ಸಮಾವೇಶ ದಿಕ್ಸೂಚಿಯಾಗಲಿದೆ ಎಂದು ಪೇರಿಯನ ಉದಯ ಕುಮಾರ್ ಹೇಳಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಬಲ್ಲಾರಂಡ ಕಂಠಿ ಕಾರ್ಯಪ್ಪ ಮಾತನಾಡಿ, ರಾಷ್ಟಿçÃಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೃಹತ್ ವಿರಾಟ್ ಹಿಂದೂ ಸಂಗಮವನ್ನು ಆಯೋಜಿಸಲಾಗುತ್ತಿದೆ. ಜಾತಿ, ಮತ, ರಾಜಕೀಯ ಬೇಧವಿಲ್ಲದೆ ಸರ್ವರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಹ ಸಂಯೋಜಕ ಕಡ್ಯದ ಉದಯ, ಸದಸ್ಯರುಗಳಾದ ಬಿ.ಆರ್. ಚೇತನ್ ಪೂಜಾರಿ, ಎನ್.ಎಸ್. ರವಿ ಉಪಸ್ಥಿತರಿದ್ದರು.