ಕೂಡಿಗೆ, ಫೆ. ೨೦:ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಸಮಿತಿ ವತಿಯಿಂದ ಮೃತ್ಯುಂಜಯ ಹೋಮ ಪೂಜಾ ಕಾರ್ಯಕ್ರಮ ನೆರವೇರಿತು. ಪೂಜೋತ್ಸವದ ಅಂಗವಾಗಿ ಮೊದಲು ಮಹಾಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ ಸೇರಿದಂತೆ ಶ್ರೀ ಉಮಾಮಹೇಶ್ವರ ಸ್ವಾಮಿಗೆ ವಿವಿಧ ಪೂಜಾ ಕೈಂಕರ್ಯಗಳು ದೇವಾಲ ಯದ ಆವರಣದಲ್ಲಿ ನಡೆದವು.
ಕೇರಳ ಸಿಹಿಕುಮಾರ್ ಮತ್ತು ಸಜಿ ಪಣೀಕರ್ ನೇತೃತ್ವದ ತಂಡದವರು ಪೂಜಾ ಕೈಂಕರ್ಯ ನೆರವೇರಿಸಿದರು. ಮೃತ್ಯುಂಜಯ ಹೋಮ ಪೂಜೋತ್ಸವದ ಕಾರ್ಯಕ್ರಮದಲ್ಲಿ ಕೂಡಿಗೆ, ಕೂಡುಮಂಗಳೂರು, ಹುದುಗೂರು ಕುಶಾಲನಗರ, ಹಾರಂಗಿ ಸೇರಿದಂತೆ ಸುತ್ತಮುತ್ತಲಿನ ನೂರಾರು ಭಕ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಟಿ.ಎಂ ಚಾಮಿ, ಉಪಾಧ್ಯಕ್ಷ ಎನ್.ಎಸ್ ಮುತ್ತಪ್ಪ, ಕಾರ್ಯದರ್ಶಿ ಬಿ.ಎಲ್ ಸುರೇಶ್ ಸೇರಿದಂತೆ ಸಮಿತಿಯ ನಿರ್ದೇಶಕರುಗಳು ಹಾಜರಿದ್ದರು.