ಗೋಣಿಕೊಪ್ಪಲು, ಫೆ. ೨೧: ರಾಷ್ಟಿçÃಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಆಚರಣೆ ಸಂಬAಧ ಗೋಣಿಕೊಪ್ಪಲಿನಲ್ಲಿ ತಾ. ೨೨ (ಇಂದು) ೧೦ ಗಂಟೆಗೆ ಹಿಂದೂ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪೂರ್ವ ತಯಾರಿ ಭರದಿಂದ ಸಾಗುತ್ತಿದೆ.

ಕೇಸರಿ ಭಾವುಟ, ಬಂಟಿAಗ್ಸ್ಗಳು ನಗರದಲ್ಲಿ ರಾರಾಜಿಸುತ್ತಿದೆ. ಬೆಳಿಗ್ಗೆ ೧೦ ಗಂಟೆಗೆ ನಗರದ ಹರಿಶ್ಚಂದ್ರಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಿಂದ ಬೃಹತ್ ಶೋಭಾಯಾತ್ರೆ ಆರಂಭವಾಗಲಿದ್ದು, ನಗರದ ಮುಖ್ಯರಸ್ತೆಯಲ್ಲಿ ಸಾಗಿ ಉಮಾಮಹೇಶ್ವರಿ ದೇವಸ್ಥಾನದ ಮುಂಭಾಗದಿAದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸಂಪನ್ನಗೊಳ್ಳಲಿದೆ. ಸಭಾ ಕಾರ್ಯಕ್ರಮವು ಹಿರಿಯ ಉದ್ಯಮಿ ಎಂ.ಪಿ. ಪ್ರಮೋದ್ ಕಾಮತ್ ಅಧ್ಯಕ್ಷತೆಯಲ್ಲಿ ಜರುಗಲಿದೆ. ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲುವಿನ ಅರ್ಚಕ ಮಹೇಶ್ ಭಟ್, ಶಿಕ್ಷಕಿ ಬೆಂಜಾAಡ ರಶ್ಮಿ ದೇವಯ್ಯ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಯಶಸ್ವಿಗೆ ಹಿಂದೂ ಸಂಗಮ ಗೋಣಿಕೊಪ್ಪ ಮಂಡಲ ಆಯೋಜನಾ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಉತ್ಸಾಹಿ ಯುವಕರು ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ನಗರ ವ್ಯಾಪ್ತಿಯ ಹಲವು ದೇವಸ್ಥಾನ ಸಮಿತಿ, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಈಗಾಗಲೇ ಸಂಪರ್ಕಿಸಿ ಸಹಕಾರ ಕೋರಲಾಗಿದೆ. ೨ ಸಾವಿರಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದ್ದು, ನಗರವನ್ನು ಬಂಟಿAಗ್ಸ್ ಮತ್ತು ಕೇಸರಿ ಭಾವುಟಗಳನ್ನು ಕಟ್ಟಿ ಅಲಂಕರಿಸಲಾಗಿದೆ. ಶೋಭಾಯಾತ್ರೆಯ ಸಂದರ್ಭ ವಿವಿಧ ಕಲಾತಂಡಗಳಿAದ ನೃತ್ಯ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಮಹಿಳೆಯರು ಕಳಸ ಹೊತ್ತು ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ೧೦ ಗಂಟೆÀೆ ಶೋಭಾಯಾತ್ರೆ ಆರಂಭಗೊAಡು ಮಧ್ಯಾಹ್ನ ೧೨ ಗಂಟೆಗೆ ಶಾಲಾ ಮೈದಾನದಲ್ಲಿ ಸಭಾ ಕಾರ್ಯಕ್ರಮವು ಜರುಗಲಿದೆ. -ಹೆಚ್.ಕೆ.ಜಗದೀಶ್