ಪೊನ್ನಂಪೇಟೆ, ಫೆ. ೨೧: ಪೊನ್ನಂಪೇಟೆ ತಾಲೂಕಿನ ಬಲ್ಯಮಂಡೂರು ಮಂಡಲದ ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಬಲ್ಯಮುಂಡೂರು ಮಂಡಲ ವ್ಯಾಪ್ತಿಯ ಕೋಟೂರು, ಬಲ್ಯಮಂಡೂರು, ತೂಚಮಕೇರಿ, ಚಿಕ್ಕಮಂಡೂರು ಮುಗುಟಗೇರಿ ಹಾಗೂ ನಡಿಕೇರಿ ಗ್ರಾಮಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹಿಂದೂ ಸಂಗಮ ಶೋಭಾಯಾತ್ರೆ ಜನಮನ ಸೆಳೆಯಿತು. ಮೆರವಣಿಗೆಯಲ್ಲಿ ಕೊಡವ ವಾಲಗದೊಂದಿಗೆ ಕೇಸರಿ ಶಾಲು ಧರಿಸಿದ್ದ ಮಹಿಳೆಯರು ಸೇರಿದಂತೆ ನೂರಾರು ಹಿಂದೂಗಳು ಚಿಕ್ಕಮಂಡೂರು ಅಪ್ಪಚ್ಚುಕವಿ ಕಾಲೇಜು ಮೈದಾನದವರೆಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು.

ನAತರ ಅಪ್ಪಚ್ಚಕವಿ ಕಾಲೇಜು ಮೈದಾನದಲ್ಲಿ ನಿವೃತ್ತ ಸೇನಾನಿ ಮಾಚಿಮಾಡ ಎಂ. ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಸಭಾ ಕಾರ್ಯಕ್ರಮವನ್ನು ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಸ್ವಾಮಿ ಪರಹಿತಾನಂದ ಮಹಾರಾಜ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಸರ್ವರಿಗೂ ಒಳಿತನ್ನು ಬಯಸುವ ಹಿಂದೂ ಧರ್ಮ ಶ್ರೇಷ್ಠ ಧರ್ಮವಾಗಿದ್ದು, ಪ್ರತಿಯೊಬ್ಬರೂ ಕೂಡ ಧರ್ಮ ಹಾಗೂ ಸಂಸ್ಕೃತಿಯ ಪಾಲನೆ ಮಾಡುವ ಮೂಲಕ ಧರ್ಮ ರಕ್ಷಣೆ ಮಾಡಬೇಕು ಎಂದು ಕರೆ ನೀಡಿದರು.

ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಸನಾತನ ಧರ್ಮದ ಆಚಾರ ವಿಚಾರ, ಸಂಸ್ಕೃತಿಯ ಬಗ್ಗೆ ಮುಂದಿನ ಪೀಳಿಗೆಗೂ ಅರಿವು ಮೂಡಿಸಬೇಕು ಎಂದರು.

ದಿಕ್ಸೂಚಿ ಭಾಷಣ ಮಾಡಿದ ರಾಷ್ಟಿçÃಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಘ ಚಾಲಕ ಚೆಕ್ಕೇರ ಮನು ಕಾವೇರಪ್ಪ, ಪಾಶ್ಚಾತ್ಯ ಸಂಸ್ಕೃತಿಯ ವ್ಯಾಮೋಹಕ್ಕೆ ಒಳಗಾಗಿ ನಮ್ಮ ಸನಾತನ ಹಿಂದೂ ಸಂಸ್ಕೃತಿಯನ್ನು ನಾವು ಕಡೆಗಣಿಸುತ್ತಿರುವುದು ಸರಿಯಲ್ಲ. ದೇಶದ ಸುಭದ್ರತೆಗೆ ಕಾರಣವಾಗಿರುವ ನಮ್ಮ ಧರ್ಮವನ್ನು ಒಡೆಯುವ ಹುನ್ನಾರ ಹಲವು ವರ್ಷಗಳಿಂದ ಅಂತರರಾಷ್ಟಿçÃಯ ಮಟ್ಟದಲ್ಲಿ ನಡೆಯುತ್ತಿದೆ. ಆದರೂ ಕೂಡ ಸನಾತನ ಹಿಂದೂ ಧರ್ಮದ ಬೇರುಗಳು ಗಟ್ಟಿಯಾಗಿರುವ ಹಿನ್ನೆಲೆಯಲ್ಲಿ ಹಿಂದೂ ಧರ್ಮ ತನ್ನ ಅಸ್ಮಿತೆಯನ್ನು ಉಳಿಸಿಕೊಂಡಿದೆ ಎಂದರು.

ನಿವೃತ್ತ ಶಿಕ್ಷಕಿ ಐನಂಡ ಟಿ. ಪುಷ್ಪ ಮಾತನಾಡಿ, ಭಾರತ್ ಮಾತಾ ಕೀ ಜೈ ಎನ್ನುವುದು ಕೇವಲ ಘೋಷಣೆಯ ವಾಕ್ಯವಲ್ಲ. ಅದು ನಮ್ಮ ಮಾತೃಭೂಮಿಯ ಮೇಲಿರುವ ಭಕ್ತಿಯಾಗಿದೆ. ಹಿಂದೂತ್ವ ಮನೆ ಮನೆಯಲ್ಲಿ ಬೆಳೆಯಬೇಕು. ಹಿಂದುತ್ವ ಮತ್ತು ಸನಾತನ ಧರ್ಮ ಬೇರೆ ಬೇರೆ ಅಲ್ಲ. ಅಹಿಂಸೆ ಮತ್ತು ಧರ್ಮದ ಮಾರ್ಗದಲ್ಲಿ ನಡೆಯುವುದೇ ಹಿಂದೂ ಧರ್ಮದ ಮೂಲಮಂತ್ರವಾಗಿದೆ. ತಾಯಂದಿರು ತಮ್ಮ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಹಿಂದೂ ಧರ್ಮದ ಸಂಸ್ಕೃತಿ, ಆಚಾರ- ವಿಚಾರ ಪರಂಪರೆಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮದ ಅಂಗವಾಗಿ ಶ್ರೀ ರಾಮಕೃಷ್ಣ ಸೇವಾಶ್ರಮ ಆಸ್ಪತ್ರೆ ವತಿಯಿಂದ ಮಕ್ಕಳ ತಜ್ಞ ಡಾ. ಪ್ರಾಣೇಶ್ ಅವರ ನೇತೃತ್ವ ತಂಡದಿAದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ನಂತರ ಬಲ್ಯಮುಂಡೂರು ಗ್ರಾಮ ಪಂಚಾಯಿತಿಗೆ ಒಳಪಡುವ ಆರು ಗ್ರಾಮಗಳ ನಡುವೆ ಪುರುಷರಿಗೆ ಹಗ್ಗಜಗ್ಗಾಟ ಹಾಗೂ ಮಹಿಳೆಯರಿಗೆ ವಿಷದ ಚೆಂಡು ಸ್ಪರ್ಧೆಗಳನ್ನು ನಡೆಸಲಾಯಿತು.

ಮಹಿಳೆಯರ ವಿಷದ ಚೆಂಡು ಸ್ಪರ್ಧೆಯಲ್ಲಿ ಚಟ್ಟಮಾಡ ತಾರಾ ಪ್ರಥಮ, ಕೋಟೂರು ಗ್ರಾಮದ ಭೂಮಿಕಾ ದ್ವಿತೀಯ ಬಹುಮಾನ ಪಡೆದುಕೊಂಡರು. ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಮುಗುಟಗೇರಿ ಭಗವತಿ ಯುವಕ ಸಂಘ ಪ್ರಥಮ, ಕೋಟೂರು ವಿನಾಯಕ ಸೇವಾ ಸಮಿತಿ ದ್ವಿತೀಯ ಬಹುಮಾನ ಪಡೆದುಕೊಂಡಿತು. ಬಲ್ಯಮುಂಡೂರು ಗ್ರಾ. ಪಂ. ಮಾಜಿ ಸದಸ್ಯ ಚೀರಂಡ ಕಂದಾ ಸುಬ್ಬಯ್ಯ ಪ್ರಾಸ್ತಾವಿಕ ಮಾತನಾಡಿದರು.