ಮಡಿಕೇರಿ, ಫೆ. ೨೧: ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಒಂದೇ ಸೂರಿನಡಿಯಲ್ಲಿ ಎಲ್ಲಾ ಇಲಾಖೆಗಳ ಆಯ್ದ ಸರ್ಕಾರದ ಸೇವೆಗಳನ್ನು ನಗರ ಸ್ಥಳೀಯ ಸಂಸ್ಥೆಯ ಭಾಗದ ನಾಗರಿಕರಿಗೆ ನೀಡುವ ಸದುದ್ದೇಶದಿಂದ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತ ಪ್ರಾಂಚೈಸಿಗಳಿAದ ಮರು ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ಕುಶಾಲನಗರ (ಟಿಎಂಸಿ), ಮಡಿಕೇರಿ (ಸಿಎಂಸಿ) ಮತ್ತು ಪೊನ್ನಂಪೇಟೆ (ಟಿಪಿ) ಈ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೇಂದ್ರವನ್ನು ತೆರೆಯಲು ಇಡಿಸಿಎಸ್ ನಿರ್ದೇಶನಾಲಯದಿಂದ ಅವಕಾಶ ಕಲ್ಪಿಸಿರುತ್ತಾರೆ. ಆಸಕ್ತ ಪ್ರಾಂಚೈಸಿಗಳು hಣಣಠಿs://ತಿತಿತಿ.ಞಚಿಡಿಟಿಚಿಣಚಿಞಚಿoಟಿe.gov.iಟಿ/Pubಟiಛಿ/ಈಡಿಚಿಟಿಛಿhiseeಣeಡಿms ಲಿಂಕ್‌ನ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಹಾಯವಾಣಿ ಸಂಖ್ಯೆ : ೦೮೦-೨೪೪೧೦೫೭೪(ಸರ್ಕಾರಿ ರಜೆಯನ್ನು ಹೊರತು ಪಡಿಸಿ ೧೦ ರಿಂದ ೬ ಗಂಟೆಯವರೆಗೆ) ಇ-ಮೇಲ್ om-eಜಛಿs@ಞಚಿಡಿಟಿಚಿಣಚಿಞಚಿ.gov.iಟಿ ಪ್ರಾಂಚೈಸಿ ಸ್ಥಾಪನೆಗಾಗಿ ಅರ್ಜಿಯನ್ನು ಫೆಬ್ರವರಿ ೧೬ ರಿಂದ ಮಾರ್ಚ್ ೨ ರವರೆಗೆ ಪ್ರತಿದಿನ ಬೆಳಿಗ್ಗೆ ೮ ಗಂಟೆಯಿAದ ರಾತ್ರಿ ೮ ಗಂಟೆಯವರೆಗೆ ಸಲ್ಲಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದ್ದಾರೆ.
ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ
ಮಡಿಕೇರಿ: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿನಲ್ಲಿ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.೩ ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್‌ಗಳು/ ಹಣಕಾಸು ಸಂಸ್ಥೆಗಳಿAದ ಸಾಲ ಪಡೆಯಬಹುದಾಗಿದೆ.
ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಪ್ರವರ್ಗ-೧ ರ ಕಾಡುಗೊಲ್ಲ ಜನಾಂಗದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-೧ ರ ಕಾಡುಗೊಲ್ಲ ಜನಾಂಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ. ೩ ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು ೨೧ ರಿಂದ ೪೫ ವರ್ಷಗಳ ಮಿತಿಯಲ್ಲಿರಬೇಕು.
ಈ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ದಾಖಲಾತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು.
ಒAದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಕಾಡುಗೊಲ್ಲ ಜನಾಂಗದ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ ೬ ಕೊನೆ ದಿನವಾಗಿದೆ. ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: ೦೮೦-೨೨೩೭೪೮೩೨, ೮೦೫೦೭೭೦೦೦೪ ಮತ್ತು ೮೦೫೦೭೭೦೦೦೫ ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ಧಾಗಿ ಅಥವಾ ದೂರವಾಣಿ ಸಂಖ್ಯೆ:೦೮೨೭೨-೨೨೧೬೫೬ ರ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.