ಗದಗ, ಫೆ. ೨೧: ಗುತ್ತಿಗೆದಾರನಿಂದ ರೂ. ೫ ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಮತ್ತು ಅವರ ಇಬ್ಬರು ಆಪ್ತ ಸಹಾಯಕರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗೆ ಸಂಬAಧಿಸಿದAತೆ ಡಾ. ಚಂದ್ರು ಲಮಾಣಿ ಗುತ್ತಿಗೆದಾರನ ಬಳಿ ೧೧ ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬAಧ ಗದಗ ತಾಲೂಕಿನ ಚಿಂಚಲಿ ಗ್ರಾಮದ ಕ್ಲಾಸ್-೧ ಗುತ್ತಿಗೆದಾರ ವಿಜಯ್ ಪೂಜಾರ ಲೋಕಾಯಕ್ತ ಪೊಲೀಸರಿಗೆ ದೂರು ನೀಡಿದ್ದರು. ಮಧ್ಯಾಹ್ನ ೨.೧೫ರ ಸುಮಾರಿಗೆ ಲಕ್ಷೆö್ಮÃಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಶಾಸಕ ಡಾ. ಚಂದ್ರು ಲಮಾಣಿ ಮತ್ತು ಅವರ ಇಬ್ಬರು ಆಪ್ತ ಸಹಾಯಕರಾದ ಮಂಜುನಾಥ ವಾಲ್ಮೀಕಿ ಮತ್ತು ಗುರು ನಾಯಕ್ ರೂ. ೫ ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ಶಾಸಕರ ಆಪ್ತ ಸಹಾಯಕ ಗುರು ನಾಯಕ್ ೫೦ ಸಾವಿರ ನಗದು ಇದ್ದ ಕವರ್ ಅನ್ನು ಆಸ್ಪತ್ರೆ ಹಿಂಭಾಗದ ಖಾಸಗಿ ಶಾಲೆಯೊಂದರ ಕಾಂಪೌAಡ್ ಒಳಕ್ಕೆ ಎಸೆದ ಘಟನೆಯೂ ನಡೆಯಿತು. ಕವರ್‌ನಲ್ಲಿದ್ದ ರೂ.೫೦ ಸಾವಿರ ಹಾಗೂ ಆಸ್ಪತ್ರೆಯಲ್ಲಿ ಸಿಕ್ಕ ರೂ. ೪.೫೦ ಲಕ್ಷ ಹಣವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.