ವೀರಾಜಪೇಟೆ, ಫೆ. ೨೨: ದಕ್ಷಿಣ ಭಾರತದ ಏಕೈಕ ಮೃತ್ಯುಂಜಯ ದೇವಸ್ಥಾನವಾಗಿರುವ ಪೊನ್ನಂಪೇಟೆ ತಾಲೂಕು ಬಾಡಗರಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಮೃತುಂಜಯ ದೇವಸ್ಥಾನದ ಆಡಳಿತ ಮಂಡಳಿಯು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿದ ಎಸ್. ಪೊನ್ನಣ್ಣ ಅವರನ್ನು ವೀರಾಜಪೇಟೆ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ದೇವಸ್ಥಾನದ ಅಭಿವೃದ್ಧಿಯ ಬಗ್ಗೆ ಸಮಾಲೋಚನೆ ನಡೆಸಿತು. ದೇವಸ್ಥಾನದ ವಾರ್ಷಿಕ ಉತ್ಸವ ಮಾರ್ಚ್ ೮ ರಂದು ನಡೆಯಲಿದ್ದು, ಶಾಸಕರನ್ನು ಆಡಳಿತ ಮಂಡಳಿ ವತಿಯಿಂದ ಆಹ್ವಾನಿಸಲಾಯಿತು. ಈ ಸಂದರ್ಭ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಚೋನಿರ ಸುಬ್ರಮಣಿ, ನಾಡ್ ತಕ್ಕರಾದ ಕಾಯಪಂಡ ಅಯ್ಯಪ್ಪ, ಕಾರ್ಯದರ್ಶಿ ಬಲ್ಯಮೀದೇರಿರ ಸಂಪತ್, ಉಪಾಧ್ಯಕ್ಷ ಕಾಯಪಂಡ ಸ್ಟಾಲಿಲ್ ಗಣಪತಿ, ದೇವಸ್ಥಾನ ಆಡಳಿತ ಮಂಡಳಿಯ ಕಾಯಪಂಡ ಕಾವೇರಪ್ಪ, ಅಣ್ಣೀರ ಲೋಕೇಶ್, ಮಲ್ಲೇಂಗಡ ನರೇಂದ್ರ, ಬಲ್ಯಮೀದೇರಿರ ರನ್ನು, ಮೀದೇರಿರ ಜೈ ಗಣಪತಿ, ಬಲ್ಯಮೀದೇರಿರ ಚೇತನ್ ಸೋಮಣ್ಣ, ಅಣ್ಣೀರ ಪ್ರತೀಕ್ ಪೊನ್ನಣ್ಣ ಹಾಗೂ ಅಣ್ಣೀರ ಹರೀಶ್ ಮಾದಪ್ಪ ಇದ್ದರು.