ಕೂಡಿಗೆ, ಫೆ. ೨೩: ಕೂಡಿಗೆ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಶಾರದ ಪೂಜೆ ಹಾಗೂ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಕೃಷ್ಣಪ್ಪ ಮಾತನಾಡಿ, ಶಿಕ್ಷಣ ಅತ್ಯಗತ್ಯವಾಗಿದ್ದು, ಯಾರೂ ಶಿಕ್ಷಣದಿಂದ ವಂಚಿತರಾಗಬಾರದು ಎಂದರು.

ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ಮಾತನಾಡಿ, ಓದುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪ್ರಾಂಶುಪಾಲೆ ಕೆ.ಆರ್. ಭಾರತಿ ಮಾತನಾಡಿ, ಶ್ರದ್ಧೆ ಹಾಗೂ ಗುರಿಯನ್ನು ವಿದ್ಯಾರ್ಥಿಗಳು ಇಟ್ಟುಕೊಳ್ಳಬೇಕೆಂದರು. ಈ ಸಂದರ್ಭ ಉತ್ತಮ ವಿದ್ಯಾರ್ಥಿನಿ ಲಿತ್ಯ ಅವರಿಗೆ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭ ಶಾಲಾ ಶಿಕ್ಷಕರಾದ ಅಶ್ವಥಿ, ತ್ರಿವೇಣಿ, ಅಂಕಿತ, ನಾಗೇಂದ್ರ, ದೊಡ್ಡಯ್ಯ, ದಿನೇಶಾಚಾರಿ, ಮೀನಾ, ಕವಿತಾ, ಜಗದೀಶ್, ವಿದ್ಯಾರ್ಥಿಗಳು ಹಾಜರಿದ್ದರು.

ಮಂಜು ಕಾರ್ಯಕ್ರಮ ನಿರೂಪಿಸಿ, ಅಮೃತ್ ಸ್ವಾಗತಿಸಿ, ಹರಿಣಾಕ್ಷಿ ವಂದಿಸಿದರು.