ವೀರಾಜಪೇಟೆ, ಫೆ. ೨೩: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿ ನಿಂದಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಚಿಕಿತ್ಸೆಗೆ ಸಹಕಾರ ನೀಡಿದ ವಿಷಯದಲ್ಲಿ ನಂದೀಶ್ ಎಂಬ ವ್ಯಕ್ತಿ ಎ.ಎಸ್.ಪೊನ್ನಣ್ಣ ಹಾಗೂ ಅವರ ಕುಟುಂಬಸ್ಥರ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿ ಸಂದೇಶ ಹರಿಯಬಿಟ್ಟ ಕುರಿತು ವಿವಿಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ನಂದೀಶ್‌ನನ್ನು ಪೊಲೀಸರು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.