ಶನಿವಾರಸಂತೆ, ಫೆ.೨೩: ಕರ್ನಾಟಕ ಜನ ಸೇವಾ ಫೌಂಡೇಶನ್, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಅಲೆಯನ್ಸ್ ಇಂಟರ್ ನ್ಯಾಷನಲ್ ಸಂಸ್ಥೆ ಸಹಯೋಗದಲ್ಲಿ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾವ್ಯೋತ್ಸವ ಸಂಭ್ರಮದ ಅಂಗವಾಗಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಶನಿವಾರಸಂತೆಯ ಸಾಹಿತಿ ಹಾಗೂ ಪತ್ರಕರ್ತೆ ಶ.ಗ. ನಯನತಾರಾ ಪ್ರಕಾಶ್ಚಂದ್ರ ಅವರಿಗೆ ರಾಷ್ಟಿçÃಯ ಸಾಹಿತ್ಯ ರತ್ನ ಪ್ರಶಸ್ತಿ ಹಾಗೂ ಮಡಿಕೇರಿ ತಾಲ್ಲಕು ಕಸಾಪ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರಿಗೆ ನಾಲ್ವಡಿ ಕೃಷ್ಣ ರಾಜ ಒಡೆಯರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಮೈಸೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿ ಗೋಪಾಲ್, ಬೆಳಗಾವಿಯ ಕಾಡಯ್ಯ ಹಿರೇಮಠ ಸ್ವಾಮೀಜಿ, ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ. ಗಂಗಾಧರ್, ಕೃಷಿಕ ಸಮಾಜದ ರಾಜ್ಯಧ್ಯಕ್ಷ ಮಾಣಿಕ್ಯ ಬ.ಚಿಲ್ಲೂರು, ಬೆಂಗಳೂರು ರಾಷ್ಟಿçÃಯ ಮಹಿಳಾ ವೇದಿಕೆ ಸಂಸ್ಥಾಪಕಿ ಜಯಂತಿಗೌಡ, ಚಿರಾಯು ಅಸೋಸಿಯೇಶನ್ ಡಾ. ಮಂಜುನಾಥ್ ಮತ್ತಿತರ ಗಣ್ಯರು ಹಾಜರಿದ್ದರು.