ಕೂಡಿಗೆ, ಫೆ. ೨೪: ಗ್ಯಾರಂಟಿ ಅನುಷ್ಠಾನ ಯೋಜನೆಯ ಅಡಿಯಲ್ಲಿ ಪ್ರಮುಖವಾಗಿ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ೭೫ ವರ್ಷ ತುಂಬಿದ ಹಾಗೂ ಪಡಿತರ ಚೀಟಿಯಲ್ಲಿ ಒಬ್ಬರೇ ನೋಂದಣಿಯಾಗಿರುವ ವೃಯೋವೃದ್ಧರಿಗೆ ಅವರ ಮನೆಯ ಬಾಗಿಲಿಗೆ ಪಡಿತರ ವಸ್ತುಗಳನ್ನು ತಲುಪಿಸುವ ಹೊಸ ಯೋಜನೆಯಲ್ಲಿ ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ೩೭ ಮಂದಿ ಇದ್ದು ಅವರಿಗೆ ಈಗಾಗಲೇ ಮನೆಯ ಬಾಗಿಲಿಗೆ ಪಡಿತರ ವಸ್ತುಗಳನ್ನು ಇಲಾಖೆಯ ಮೂಲಕ ತಲುಪಿಸಲಾಗುತ್ತಿದೆ ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ ಶಶಿಧರ್ ಮಾಹಿತಿ ನೀಡಿದರು.
ಕುಶಾಲನಗರ ಪುರಸಭಾ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ, ಗೃಹಲಕ್ಷಿö್ಮ ಯೋಜನೆ, ಯುವನಿಧಿ ಯೋಜನೆಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವುದರ ಜೊತೆಯಲ್ಲಿ ಯೋಜನೆಯನ್ನು ಎಲ್ಲಾ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ಅನುಷ್ಠಾನ ವರದಿಯನ್ನು ಓದಿ ಯೋಜನೆಯ ಪ್ರಗತಿ ಸಂಬAಧ ಚರ್ಚೆ ನಡೆಯಿತು.
ಗೃಹಲಕ್ಷಿö್ಮ ಯೋಜನೆಗೆ ಸಂಬAಧಿಸಿದAತೆ ತಾಲೂಕು ಮಟ್ಟದ ಅಧಿಕಾರಿ ಸಭೆಗೆ ಹಾಜರಿರದ ಬಗ್ಗೆ ಆಕ್ಷೇಪ ವ್ಯಕ್ತವಾಯಿತು. ಅರೆಕಾಲಿಕ ಸಿಬ್ಬಂದಿಯನ್ನು ಸಭೆಗೆ ಕಳುಹಿಸಿ ಅನುಪಾಲನಾ ವರದಿಯೂ ನೀಡದಿದ್ದಕ್ಕೆ ವಿರೋಧ ವ್ಯಕ್ತವಾಯಿತು. ಗೃಹಜ್ಯೋತಿ ಯೋಜನೆ ವಿಷಯಗಳ ಪ್ರಸ್ತಾವನೆಯಲ್ಲಿ, ನೂತನ ಚೆಸ್ಕಾಂ ವಿದ್ಯುತ್ ಶಾಖಾ ಕಛೇರಿಯನ್ನು ತೆರಯುವ ಮೂಲಕ ಗ್ರಾಮಾಂತರ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಲಾಖೆಯ ವ್ಯವಸ್ಥಾಪಕರಿಗೆ ಪತ್ರವ್ಯವಹಾರ ಮಾಡುವ ಬಗ್ಗೆ ಸಭೆಯಲ್ಲಿ ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ ಭೀಮಯ್ಯ, ಸದಸ್ಯ ಅಣ್ಣಯ್ಯ, ತಾಲೂಕು ಸಮಿತಿ ಸದಸ್ಯರಾದ ಕೆ.ಎಸ್ ಕೃಷ್ಣಗೌಡ, ಶ್ರೀನಿವಾಸ, ಅಬ್ದುಲ್ ರಜಾಕ್, ರಫೀಕ್ ಖಾನ್, ಆದಂ, ಮಲ್ಲಿಕಾರ್ಜುನ, ಶ್ರೀನಿವಾಸ್, ಮುಸ್ತಫಾ, ಫಿಲೋಮಿನಾ, ರಾಜಶೇಖರ, ಕಿಶೋರ್, ಸುಹಾದ್ ಆಶ್ರಫ್ ಸೇರಿದಂತೆ ಅನ್ನಭಾಗ್ಯ ಯೋಜನೆಯ ಆಹಾರ ಶಿರಸ್ತೇದಾರರಾದ ಸ್ವಾತಿ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶ್ರೀದೇವಿ, ವಿದ್ಯುತ್ ಇಲಾಖೆಯ ಇಂಜಿನಿಯರ್ ರಾಣಿ, ಸಾರಿಗೆ ಇಲಾಖೆ ಅಧಿಕಾರಿ ನಾಗಮಲ್ಲೇಶ್, ಉದ್ಯೋಗ ವಿನಿಮಯ ಇಲಾಖೆ ಅಧಿಕಾರಿ ಮಂಜುನಾಥ, ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು.