ಚೆಯ್ಯಂಡಾಣೆ, ಫೆ. ೨೪: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದು ತಾಯಿ ಮಗ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಟ್ಟಗೇರಿ ಮಡಿಕೇರಿ ಮುಖ್ಯ ರಸ್ತೆಯ ಅಪ್ಪಂಗಳದಲ್ಲಿ ನಡೆದಿದೆ. ಮಡಿಕೇರಿ ಕಡೆಯಿಂದ ಅಪ್ಪಂಗಳ ನಿವಾಸಿ ಸಾಗರ್ ಎಂಬವರು ಚಲಾಯಿಸುತ್ತಿದ್ದ ಮಾರುತಿ ಆಲ್ಟೊ ಕಾರು ಬೆಟ್ಟಗೇರಿ ಮಡಿಕೇರಿ ಮುಖ್ಯರಸ್ತೆಯ ಅಪ್ಪಂಗಳ ಬಳಿಯ ರಸ್ತೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ೨೦ ಅಡಿ ಆಳದ ಗದ್ದೆಗೆ ಉರುಳಿ ಬಿದ್ದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊAಡಿದ್ದು ಕಾರಿನಲ್ಲಿದ್ದ ಚಾಲಕ ಸಾಗರ್ ಹಾಗೂ ಅವರ ತಾಯಿಗೆ ಸಣ್ಣಪುಟ್ಟ ಗಾಯಗಳಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.