ಮಡಿಕೇರಿ, ಫೆ. ೨೪: ಅವಧಿ ಪೂರ್ಣಗೊಂಡ ಮಡಿಕೇರಿ ತಾಲೂಕಿನ ೨೬ ಗ್ರಾ.ಪಂ.ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ವಿವಿಧ ಇಲಾಖೆ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಸಾರ್ವತ್ರಿಕ ಚುನಾವಣೆ ಮುಗಿದು ನೂತನ ಆಡಳಿತ ರಚನೆಯಾಗುವ ತನಕ ಆಡಳಿತಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಗಾಳಿಬೀಡು ಗ್ರಾ.ಪಂಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಮಕ್ಕಂದೂರು ಗ್ರಾ.ಪಂ.ಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಕೆ. ನಿಡುಗಣೆಗೆ ಕೃಷಿ ಇಲಾಖೆ ಉಪನಿರ್ದೇಶಕರು, ಕಡಗದಾಳು ಗ್ರಾ.ಪಂ.ಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಾಯಕ ನಿರ್ದೇಶಕರು, ಮರಗೋಡಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಹೊಸ್ಕೇರಿ ಗ್ರಾ.ಪಂ.ಗೆ ಆಹಾರ ಇಲಾಖೆ ಉಪನಿರ್ದೇಶಕರು, ಕಾಂತೂರು ಮೂರ್ನಾಡುವಿಗೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಹೊದ್ದೂರು ಗ್ರಾ.ಪಂ.ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರು, ಹಾಕತ್ತೂರು ಗ್ರಾ.ಪಂ.ಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ, ಮೇಕೇರಿಗೆ ಸಹಕಾರ ಸಂಘಗಳ ಉಪನಿಬಂಧಕರು, ಬೆಟ್ಟಗೇರಿ ಗ್ರಾ.ಪಂ.ಗೆ ಜಿ.ಪಂ. ಸಹಾಯಕ ಕಾರ್ಯದರ್ಶಿ, ಮದೆ ಗ್ರಾ.ಪಂ.ಗೆ ಜಿಲ್ಲಾ ಕಾರ್ಮಿಕ ಅಧಿಕಾರಿ, ಸಂಪಾಜೆಗೆ ಭೂದಾಖಲೆಗಳ ಸಹಾಯಕ ನಿರ್ದೇಶಕರು, ಚೆಂಬು ಗ್ರಾ.ಪಂ.ಗೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು, ಪೆರಾಜೆಗೆ ಜಿ.ಪಂ. ಉಪಕಾರ್ಯದರ್ಶಿ, ಕರಿಕೆಗೆ ಜಿ.ಪಂ. ಮುಖ್ಯ ಯೋಜನಾಧಿಕಾರಿ, ಭಾಗಮಂಡಲಕ್ಕೆ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು, ಅಯ್ಯಂಗೇರಿಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು, ಕುಂದಚೇರಿಗೆ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖಾಧಿಕಾರಿ, ಬೇಂಗೂರು ಚೇರಂಬಾಣೆಗೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ, ಬಲ್ಲಮಾವಟಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್, ಎಮ್ಮೆಮಾಡು ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗದ ಕಾರ್ಯಪಾಲಕ ಅಭಿಯಂತರ, ನಾಪೋಕ್ಲುವಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ, ಕುಂಜಿಲ ಕಕ್ಕಬ್ಬೆಗೆ ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಕೊಣಂಜಗೇರಿಗೆ ಮಡಿಕೇರಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ, ನರಿಯಂದಡ ಗ್ರಾ.ಪಂ.ಗೆ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರನ್ನು ನಿಯೋಜನೆ ಮಾಡಲಾಗಿದೆ.