ಬೆಂಗಳೂರು, ಫೆ. ೨೫: ಸರ್ಕಾರಕ್ಕೆ ಗ್ಯಾರಂಟಿಗಳು ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಆ್ಯಂಬುಲೆನ್ಸ್ ಸೇವೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಉಚಿತ ವಿದ್ಯುತ್, ಗೃಹಲಕ್ಷಿö್ಮ, ಅನ್ನಭಾಗ್ಯ, ಶಕ್ತಿಯೋಜನೆಯಂತಹ ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ನೀಡಿದೆ. ಸರ್ಕಾರಕ್ಕೆ ಇದರಿಂದ ಹೊರೆಯಾಗುತ್ತಿರಬಹುದು. ಆದರೆ ನಿಮಗೆ ಮಾನಸಿಕವಾಗಿ ಧೈರ್ಯ ತುಂಬಲು ಹಾಗೂ ಆರ್ಥಿಕವಾಗಿ ಶಕ್ತಿ ತುಂಬಲು ಇಂತಹ ದೊಡ್ಡ ತೀರ್ಮಾನವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದ್ದಾರೆ.