ವೀರಾಜಪೇಟೆ, ಫೆ. ೨೫: ವಿರಾಜಪೇಟೆ ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ವೀರಾಜಪೇಟೆಯಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮ ಭಕ್ತಿ ಭಾವ, ಶಿಸ್ತಿನೊಂದಿಗೆ ವೈಭವಯುತವಾಗಿ ನಡೆಯಿತು. ತೆಲುಗರ ಬೀದಿಯಲ್ಲಿನ ಮಾರಿಯಮ್ಮ ದೇವಸ್ಥಾನದ ಬಳಿಯಿಂದ ಆರಂಭಗೊAಡ ಶೋಭಾಯಾತ್ರೆಗೆ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಹಿಂದೂ ಸಮಾಜದ ಮುಖಂಡರು ಚಾಲನೆ ನೀಡಿದರು.

ನಗರದ ಮುಖ್ಯಬೀದಿಗಳಿಂದ ಹೊರಟ ಹಿಂದೂ ಸಂಗಮದ ಬೃಹತ್ ಶೋಭಾಯಾತ್ರೆಗೆ ಜನಸಾಗರವೇ ಹರಿದು ಬಂತು. ರಾಷ್ಟಿçÃಯ ಸ್ವಯಂ ಸೇವಕ ಸಂಘದ ಶತಾಬ್ದಿ ಸಂಭ್ರಮದ ಭಾಗವಾಗಿ ನಡೆದ ಶೋಭಾಯಾತ್ರೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಯಿತು. ಭಜನಾ ತಂಡಗಳು, ಡೊಳ್ಳು ಕುಣಿತ ಕಲಾವಿದರು, ಜೇನುಕುರುಬರ ನೃತ್ಯ, ಉಮ್ಮತ್ತಾಟ್ ಪ್ರದರ್ಶನ, ದೇಶಭಕ್ತಿಯನ್ನು ಸಾರುವ ವೈವಿಧ್ಯಮಯ ಟ್ಯಾಬ್ಲೋಗಳು, ಕೇರಳದ ಚಂಡೆ, ಕೊಡಗಿನ ವಾಲಗ, ಗೊಂಬೆ ಕುಣಿತ ಸಹಿತ್ಲ ಕಳಸ ಹೊತ್ತು ಮಹಿಳೆಯರು ಮೆರವಣಿಯಲ್ಲಿ ಭಾಗಿಯಾಗಿ ಮೆರುಗನ್ನು ಹೆಚ್ಚಿಸಿದರು. ಇದರೊಂದಿಗೆ ಎತ್ತಿನಗಾಡಿ ಮೆರವಣಿಗೆ ಸಂಸ್ಕೃತಿಯ ಪ್ರತೀಕದಂತೆ ಗಮನ ಸೆಳೆಯಿತು.

ವೇದಿಕೆಯಲ್ಲಿ ಮಕ್ಕಳ ಸಾಂಸ್ಕöÈತಿಕ ನೃತ್ಯ ವೈಭವ ಆಕರ್ಷಣಿಯವಾಗಿತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ನೀರು, ತಂಪು ಪಾನೀಯ, ಮಜ್ಜಿಗೆ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ನೆರೆದಿದ್ದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಶೋಭಾಯಾತ್ರೆಗೆ ವೀರಾಜಪೇಟೆ ಪಟ್ಟಣ ಹಾಗೂ ಗ್ರಾಮೀಣ ಭಾಗದಿಂದ ನಿರೀಕ್ಷೆಗೂ ಮೀರಿ ಜನಸಾಗರವೇ ಹರಿದು ಬಂತು. ಬಿಸಿಲನ್ನು ಲೆಕ್ಕಿಸದೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಶೋಭಾಯಾತ್ರೆ ನೋಡುವುದರ ಜೊತೆಗೆ ಯುವಕ ಯುವತಿಯರು ಕುಣಿದು ಕುಪ್ಪಳಿಸಿದರು. ಪಟ್ಟಣದ ಮೂರು ಕಡೆಗಳಿಂದ ಶೋಭಾಯಾತ್ರೆ ನಡೆಯಿತು. ಪಟ್ಟಣದ ತೆಲುಗುರ ಬೀದಿಯ ಮಾರಿಯಮ್ಮ ೪ನಾಲ್ಕನೇ ಪುಟಕ್ಕೆ

(ಮೊದಲ ಪುಟದಿಂದ) ಗುಡಿಯಿಂದ, ಅದೇ ಸಮಯಕ್ಕೆ ಮೀನುಪೇಟೆ ಮುತ್ತಪ್ಪ ದೇವಾಲಯದಿಂದ ಒಂದು ತಂಡ, ಪಂಜರುಪೇಟೆ ಸರ್ವೋದಯ ಕಾಲೇಜಿನಿಂದ ಮತ್ತೊಂದು ತಂಡ ಏಕಕಾಲದಲ್ಲಿ ಶೋಭಾಯಾತ್ರೆ ಹೊರಟು ದೊಡಟ್ಟಿ ಚೌಕಿ ಬಳಿ ಮಹಾ ಸಂಗಮಗೊAಡು ಎಫ್‌ಎಂಸಿ ರಸ್ತೆಯ ಮೂಲಕ ತಾಲೂಕು ಮೈದಾನದಲ್ಲಿ ಸೇರಿತು.

ಸಭಾ ಕಾರ್ಯಕ್ರಮ

ತಾಲೂಕು ಮೈದಾನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಷ್ಟಿçÃಯ ಸ್ವಯಂ ಸೇವಕ ಸಂಘದ ಪ್ರಾಂತ ಗೋ ಸೇವಕ ಪ್ರಮುಖ್ ಹರೀಶ್ ಸರಳಾಯ ಮಾತನಾಡಿ, ಪ್ರತಿಯೊಬ್ಬ ಹಿಂದೂ ನಾವೆಲ್ಲ ಒಂದು ಎಂಬ ಪರಿಕಲ್ಪನೆಯಲ್ಲಿ ಒಗ್ಗೂಡಬೇಕಾಗಿದೆ. ಭಾರತೀಯರು ಜಗತ್ತಿಗೆ ಸಂಸ್ಕöÈತಿ, ನಾಗರಿಕತೆ ಹಾಗೂ ಬದುಕುವ ಕಲೆ ಹೇಳಿಕೊಟ್ಟಿದ್ದಾರೆ. ನಮ್ಮ ದೇಶ ಉಳಿಯಬೇಕೆಂದರೆ ಹಿಂದೂ ಧರ್ಮ ಉಳಿಯಬೇಕು. ಆ ನಿಟ್ಟಿನಲ್ಲಿ ಹಿಂದೂಗಳು ಸಂಘಟಿತರಾಗಬೇಕು ಎಂದು ಕರೆ ನೀಡಿದರು.

ಅವಿಭಕ್ತ ಕುಟುಂಬವೇ ಹಿಂದೂ ಧರ್ಮದ ದೊಡ್ಡ ಶಕ್ತಿ. ಒಟ್ಟಾಗಿ ಬದುಕುವ ಸಂಸ್ಕಾರ ನಮ್ಮ ಧರ್ಮದ ಮೂಲ. ಇತ್ತೀಚಿನ ನಗರ ವ್ಯಾಮೋಹ ಹಾಗೂ ಆಧುನಿಕ ಜೀವನ ಶೈಲಿಯಿಂದ ವಿಚ್ಛೇದನ ಪ್ರಕರಣ ಹೆಚ್ಚಾಗುತ್ತಿದೆ. ಇದು ಹಿಂದೂ ಧರ್ಮ ಹಾಗೂ ಸಮಾಜಕ್ಕೆ ಮಾರಕವಾಗುವ ಅಪಾಯವಿದೆ. ಕುಟುಂಬ ಮೌಲ್ಯಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಮುಖ್ಯ ಅತಿಥಿ ಡಾ. ಮಾತಂಡ ಅಯ್ಯಪ್ಪ ಮಾತನಾಡಿ ಹಿಂದುತ್ವವನ್ನು ಹೊರಗಿಟ್ಟು ಭಾರತವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಹಿಂದುತ್ವದ ದೃಷ್ಟಿಯಿಂದ ಕೆಲಸ ಮಾಡಿದಾಗ ಮಾತ್ರ ಸಮಾಜದ ಕೆಲವು ಪಿಡುಗುಗಳನ್ನು ಕಿತ್ತೆಸೆಯಲು ಸಾಧ್ಯ. ನಾವುಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಹಿಂದುತ್ವ ಜಾತಿಯಲ್ಲ ಅದು ಜೀವನ ಕ್ರಮ ಎಂದರು.

ಪ್ರಮುಖರಾದ ಡಾ.ಚೇಂದಿರ ಬೋಪಣ್ಣ ಮಾತನಾಡಿ, ದೇಶದ ಕಠಿಣ ಸಂದರ್ಭಗಳಲ್ಲಿ ಆಸರೆಯಾಗಿ ನಿಂತ ಶಕ್ತಿ ರಾಷ್ಟಿçÃಯ ಸ್ವಯಂಸೇವಕ ಸಂಘಕ್ಕಿದೆ. ಇಂದು ಸಂಸ್ಕöÈತಿಯು ವಿಕೃತಿಯತ್ತ ಸಾಗುತ್ತಿರುವ ಕಾಲಘಟ್ಟದಲ್ಲಿ ಸ್ತಿçÃಯರಿಗೆ ಮತ್ತು ಸಮಾಜಕ್ಕೆ ಸಂಸ್ಕಾರಯುತ ಜೀವನ ರೂಪಿಸುವಲ್ಲಿ ಸಂಘದ ಪಾತ್ರ ಅಪಾರ ಎಂದರು. ಹಿಂದೂ ಸಂಗಮ ಆಯೋಜನಾ ಸಮಿತಿ ವೀರಾಜಪೇಟೆ ತಾಲೂಕು ಅಧ್ಯಕ್ಷ ಕುಪ್ಪಂಡ ರಾಜೀವ್ ಕಾರ್ಯಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ ಧಾರ್ಮಿಕ ಮತ್ತು ರಾಷ್ಟಿçÃಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ವೇದಿಕೆಯಲ್ಲಿ ಸಹ ಸಂಚಾಲಕ ಹೇಮಂತ್, ಸಂಯೋಜಕರುಗಳಾದ ಮನೆಯಪಂಡ ಕಾಂತಿ ಸತೀಶ್, ಪಟ್ರಪಂಡ ಗೀತಾ ಬೆಳ್ಯಪ್ಪ, ಅಂಜಪರವAಡ ಅನಿಲ್ ಮಂದಣ್ಣ, ಸವಿತಾ ಸಮಾಜದ ಅಧ್ಯಕ್ಷ ವೆಂಕಟೇಶ್, ಮುತ್ತಪ್ಪ ಮಲಯಾಳಿ ಸಮಾಜದ ಅಧ್ಯಕ್ಷ ಪಿ.ಜಿ. ಸುಮೇಶ್, ಕೊಡವ ಸಮಾಜದ ಸಂಪಿ ಪೂಣಚ್ಚ, ಮಾಳೇಟಿರ ಶ್ರೀನಿವಾಸ್, ಕಾವೇರಿ ಆಶ್ರಮದ ಪ್ರಮುಖರಾದ ಪ್ರತಾಪ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು. ವರದಿ: ಈಶಾನ್ವಿ