ಮಡಿಕೇರಿ, ಫೆ. ೨೬: ಕರ್ನಾಟಕ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ-೧೯೪೮, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-೧೯೬೧, ತೋಟ ಕಾರ್ಮಿಕರ ಕಾಯ್ದೆ-೧೯೫೧, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು)ಕಾಯ್ದೆ, ೧೯೬೬ ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ-೧೯೬೧ ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ೧೮ ರಿಂದ ೫೨ ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆöÊರ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ, ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ ೧೨ ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬAಧಿಸಿದ ಉದ್ಯೋಗದಾತರು ಒದಗಿಸುವಂತೆ ಸರ್ಕಾರದ ಆದೇಶ ಸಂಖ್ಯೆ. ‘ಕಾಇ ೪೬೬ಎಲ್‌ಇಟಿ ೨೦೨೩’, ಬೆಂಗಳೂರು, ದಿನಾಂಕ: ೧೨-೧೧-೨೦೨೫ರಲ್ಲಿ ಆದೇಶವಿದೆ.

ಈ ಆದೇಶದನ್ವಯ ಉದ್ಯೋಗದಾತರು ಪ್ರತೀ ಮಾಸಿಕ ಒಂದು ದಿನದ ಋತುಚಕ್ರದ ರಜೆಯನ್ನು ನೀಡಬೇಕಾಗಿದ್ದು, ಯಾವುದೇ ವೈದ್ಯಕೀಯ ಪ್ರಮಾಣಪತ್ರ ಒದಗಿಸುವ ಅವಶ್ಯಕತೆ ಇರುವುದಿಲ್ಲ ಹಾಗೂ ಮಹಿಳಾ ನೌಕರರು ಆಯಾಯ ತಿಂಗಳ ಋತುಚಕ್ರದ ರಜೆಯನ್ನು ಆಯಾಯ ತಿಂಗಳಿನಲ್ಲಿಯೇ ಬಳಸಿಕೊಳ್ಳಬಹುದಾಗಿದೆ ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಕಾವೇರಿ ಟಿ. ಅವರು ತಿಳಿಸಿದ್ದಾರೆ.