ಮಡಿಕೇರಿ ಫೆ.೨೭: ಪರೀಕ್ಷೆಯ ಫಲಿತಾಂಶದ ಅಂಕಗಳ ಆಧಾರದಲ್ಲಿ ಇತರ ವಿದ್ಯಾರ್ಥಿಗಳ ಜೊತೆ ತಮ್ಮ ಮಕ್ಕಳನ್ನು ಹೋಲಿಕೆ ಮಾಡುವುದು ಸರಿಯಲ್ಲ, ಇಂತಹ ಹೋಲಿಕೆಯು ಚಿಕ್ಕ ಮಕ್ಕಳಲ್ಲಿ ಹೆಚ್ಚಿನ ಪ್ರಭಾವ ಬೀರುತ್ತದೆ. ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಸಲಹೆ ನೀಡಿದರು.
ಕೊಡಗು ಜಿಲ್ಲಾಡಳಿತ, ನವದೆಹಲಿಯ ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗÀದ ಸಹಯೋಗದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ವಿವಿಧ ಇಲಾಖೆಯ ಭಾಗೀದಾರರಿಗೆ ಮಕ್ಕಳ ಹಕ್ಕುಗಳನ್ನು ಅನುಷ್ಠಾನಗೊಳಿಸಲು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಮಕ್ಕಳ ಹಕ್ಕುಗಳಿಗೆ ಸಂಬAಧಿಸಿದ ವಿವಿಧ ಕಾಯ್ದೆಗಳ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಮೇಲೆ ಒತ್ತಡ ಹೇರದೆ, ಒಳ್ಳೆಯ ಸಲಹೆ-ಮಾರ್ಗದರ್ಶನ ನೀಡುವುದರ ಜತೆಗೆ ಧೈರ್ಯ ತುಂಬಿ ಮಕ್ಕಳ ಮನಸ್ಸನ್ನು ಪೋಷಕರು ಗೆಲ್ಲುವಂತಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಎಲ್ಲರ ಕುಟುಂಬದಲ್ಲೂ ಮಕ್ಕಳ ಮೇಲೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಒತ್ತಡ ಸೃಷ್ಟಿಯಾಗುತ್ತದೆ, ಇದರಿಂದ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು, ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯ ಫಲಿತಾಂಶವೇ ಕೊನೆಯಲ್ಲಿ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಎಂಬುದಾಗಿ ಪೋಷಕರು ಮಕ್ಕಳಿಗೆ ಮನವರಿಕೆ ಮಾಡಬೇಕು ಎಂದು ಸಲಹೆ ಮಾಡಿದರು.
ಮಕ್ಕಳ ಮೇಲೆ ಆಗುವ ದೌರ್ಜನ್ಯ ನಿಂತಿದೆಯೇ ಎಂಬ ಬಗ್ಗೆ ಪ್ರಶ್ನೆ ಮಾಡಿಕೊಳ್ಳಬೇಕಿದೆ. ಪೋಕ್ಸೋ ಪ್ರಕರಣಗಳು ಕಡಿಮೆ ಆಗಿಲ್ಲ, ಸಾಕಷ್ಟು ಅರಿವು ಮೂಡಿಸಿದರೂ ಸಹ ಕಡಿಮೆಯಾಗುತ್ತಿಲ್ಲ. ಸಮಾಜವು ಎಲ್ಲಿ ಎಡವುತ್ತಿದೆ ಎಂಬ ಬಗ್ಗೆ ನಾವುಗಳೇ ಪ್ರಶ್ನೆ ಮಾಡಿಕೊಳ್ಳಬೇಕಿದೆ ಎಂದು ಶುಭ ಅವರು ಬೇಸರ ವ್ಯಕ್ತಪಡಿಸಿದರು. ಮಕ್ಕಳ ಮೇಲೆ ಆಗುವ ದೌರ್ಜನ್ಯ ತಡೆಯುವಲ್ಲಿ ಆಡಳಿತ ವ್ಯವಸ್ಥೆ ಮತ್ತು ಸಮಾಜ ಕೆಲಸ ಮಾಡಬೇಕು ಎಂದು ಕೋರಿದರು. ಮಕ್ಕಳು ಭವಿಷ್ಯದ ಪ್ರಜೆಗಳಾಗಿದ್ದು, ಎಲ್ಲರಂತೆ ಬದುಕುವ ಹಕ್ಕು ಇದ್ದು, ಅದರಂತೆ ನಡೆದುಕೊಳ್ಳಬೇಕು ಎಂದರು.
ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಂಡು ಆರೈಕೆ ಮಾಡಬೇಕು. ವಿಶೇಷ ಗಮನ ಹರಿಸಬೇಕು. ಪ್ರತೀ ಮಗುವಿನಲ್ಲೂ ಸಹ ಒಂದಲ್ಲ ಒಂದು ರೀತಿಯ ವಿಶೇಷತೆ ಇದ್ದು, ವಿಶೇಷತೆಯ ಬೆಳವಣಿಗೆಗೆ ಪ್ರೋತ್ಸಾಹಿಸಬೇಕು. ಆ ನಿಟ್ಟಿನಲ್ಲಿ ಮಕ್ಕಳನ್ನು ಉತ್ತಮ ರೀತಿಯಲ್ಲಿ ಬೆಳೆಸಬೇಕು ಎಂದು ಅವರು ನುಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ಮಾತನಾಡಿ, ಪ್ರತಿಯೊಂದು ಕುಟುಂಬಕ್ಕೂ ಹಾಗೂ ಸಮಾಜಕ್ಕೂ ಮಕ್ಕಳೇ ಸಂಪತ್ತಾಗಿದ್ದು, ಮಕ್ಕಳ ಸೂಕ್ಷö್ಮತೆಯನ್ನು ಅರ್ಥ ಮಾಡಿಕೊಂಡು ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡಬೇಕಿದೆ ಎಂದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಮಯಕ್ಕೆ ತಕ್ಕಂತೆ ಫಲಿತಾಂಶ ಪಡೆದು ಬದುಕುವುದು ಅತ್ಯಗತ್ಯ. ಆದರೆ ಮಕ್ಕಳಲ್ಲಿ ಯಾವುದೇ ಕಾರಣಕ್ಕೂ ಒತ್ತಡ ತರಬಾರದು ಎಂದರು. ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು. ಮಕ್ಕಳ ಅಭಿವೃದ್ಧಿ ಮತ್ತು ವಿಕಾಸಕ್ಕೆ ಒತ್ತು ನೀಡಬೇಕು. ಜೊತೆಗೆ ಮೂಲ ಸೌಲಭ್ಯವನ್ನು ಕಲ್ಪಿಸಬೇಕು ಎಂದು ವೆಂಕಟೇಶ್ ಅವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಹಕ್ಕುಗಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್, ಕಾರ್ಮಿಕ ಇಲಾಖೆ ಹೀಗೆ ವಿವಿಧ ಇಲಾಖೆಗಳು ಕೈಜೋಡಿಸಿ ಸಮನ್ವಯತೆಯಿಂದ ಕೆಲಸ ಮಾಡಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕರಾದ ಡಾ.ಕೆ.ರಾಘವೇಂದ್ರ ಭಟ್ ಅವರು ಬಾಲನ್ಯಾಯ ಕಾಯಿದೆ ಹಾಗೂ ಪೋಕ್ಸೊ ಕಾಯಿದೆಯ ಕುರಿತು ಮತ್ತು ಮಕ್ಕಳ ಹಕ್ಕುಗಳ ಕುರಿತು ವಿವರವಾಗಿ ತಿಳಿಸಿದರು.
ನವದೆಹಲಿಯ ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಲಹೆಗಾರರಾದ ಶುಭಿ ಶರ್ಮಾ ಅವರು ಮಕ್ಕಳ ಮೇಲೆ ದೈಹಿಕ ದಂಡನೆ ಕುರಿತ ಕಾಯ್ದೆ ಕುರಿತು ಮತ್ತು ಇದರಿಂದ ಮಕ್ಕಳ ಮೇಲಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿದರು. ಅದೇ ರೀತಿ ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾರ್ಯವೈಖರಿಗಳ ಕುರಿತು ವಿವರಿಸಿದರು.
ಜಿ.ಪಂ ಉಪ ಕಾರ್ಯದರ್ಶಿ ಚಂದ್ರಶೇಖರ್, ತಹಶೀಲ್ದಾರ್ ಶ್ರೀಧರ, ಡಯಟ್ ಕೂಡಿಗೆ ಪ್ರಾಂಶುಪಾಲರಾದ ಅರಸ್ ಇತರರು ಇದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಸ್ ಹೊನ್ನೇಗೌಡ ಸ್ವಾಗತಿಸಿದರು, ಮಧು ಪ್ರಾರ್ಥಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎಸ್ ಜಯಪ್ಪ ನಿರೂಪಿಸಿ, ವಂದಿಸಿದರು.