ಮಡಿಕೇರಿ, ಫೆ. ೨೮: ಕೊಡವ ಕುಟುಂಬಗಳ ನಡುವೆ ನಡೆಯಲಿರುವ ವಾರ್ಷಿಕ ಕೌಟುಂಬಿಕ ಕ್ರಿಕೆಟ್ ನಮ್ಮೆಯನ್ನು ಬೇತ್ರಿ ಮುಕ್ಕಾಟಿರ ಕುಟುಂಬ ಆಯೋಜಿಸುತ್ತಿದ್ದು, ಇದರ ವೆಬ್‌ಸೈಟ್ ಅನಾವರಣ ಕಾರ್ಯಕ್ರಮ ಮಾ. ೩ ರಂದು ಮೂರ್ನಾಡು ಕೊಡವ ಸಮಾಜದಲ್ಲಿ ಜರುಗಲಿದೆ.
ಏಪ್ರಿಲ್ - ಮೇ ತಿಂಗಳಿನಲ್ಲಿ ಮೂರ್ನಾಡು ಹಾಗೂ ಅರಮೇರಿಯಲ್ಲಿ ಈ ಬಾರಿಯ ಕ್ರಿಕೆಟ್ ಉತ್ಸವಕ್ಕೆ ಸಿದ್ಧತೆ ನಡೆದಿದೆ. ತಾ. ೩ ರಂದು ಬೆಳಿಗ್ಗೆ ೧೦ ಗಂಟೆಗೆ ಮೂರ್ನಾಡು ಕೊಡವ ಸಮಾಜದಲ್ಲಿ ವೆಬ್‌ಸೈಟ್ ಬಿಡುಗಡೆ ಕಾರ್ಯಕ್ರಮ ಕುಟುಂಬದ ಪಟ್ಟೆದಾರ ಮುಕ್ಕಾಟಿರ ಎ. ಕಾಳಪ್ಪ (ಮಿಟ್ಟು) ಹಾಗೂ ಅಧ್ಯಕ್ಷ ಸುರೇಶ್ ಪೆಮ್ಮಯ್ಯ ಮುಂದಾಳತ್ವದಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಅಂತರರಾಷ್ಟಿçÃಯ ಬಾಸ್ಕೆಟ್‌ಬಾಲ್ ಆಟಗಾರ್ತಿ ಡಾ. ಮಂಡೇಪAಡ ಪುಷ್ಪ ಕುಟ್ಟಣ್ಣ, ಮಾಜಿ ಅಂತರರಾಷ್ಟಿçÃಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಅವರುಗಳು ಪಾಲ್ಗೊಳ್ಳಲಿದ್ದಾರೆ. ಕೊಡವ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷ ಕೀತಿಯಂಡ ಕಾರ್ಸನ್ ಕಾರ್ಯಪ್ಪ, ಕಾರ್ಯದರ್ಶಿ ಕುಂಡ್ರAಡ ಎಂ. ಬೋಪಣ್ಣ ಅವರುಗಳು ಪಾಲ್ಗೊಳ್ಳಲಿರುವರು.