ಮಡಿಕೇರಿ, ಮಾ. ೧: ನಾಪೋಕ್ಲುವಿನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಪ್ಪಚ್ಚಿರ ಗೌತಮ್ ಅವರನ್ನು ಕೊಡಗು ಮೈಸೂರು ಸಂಸದ ಯದುವೀರ್ ಒಡೆಯರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಅತ್ಯಂತ ಗಂಭೀರವಾದ ಕೃತ್ಯವಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ತಕ್ಕ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ]ಪಾಠ ಕಲಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿAದ ನಿರಂತರವಾಗಿ ಕೋಮು ಗಲಭೆ ನಡೆಯುತ್ತಲೇ ಇದೆ. ನಾಗಮಂಗಲ, ಮಂಡ್ಯ ಭಾಗದಲ್ಲಿ ಅಹಿತಕರ ಘಟನೆಗಳು ನಡೆದಿವೆ. ಇಂತಹ ಕೃತ್ಯದಲ್ಲಿ ತೊಡಗುವವರ ಮೇಲೆ ಕಠಿನ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭ ಮಾಜಿ ಶಾಸಕ ಅಪ್ಪಚ್ಚು ರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಅರುಣ್‌ಕುಮಾರ್, ನಗರಸಭೆ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ, ಜಗದೀಶ್, ಉಮೇಶ್ ಸುಬ್ರಮಣಿ ಮತ್ತಿತರರು ಇದ್ದರು.