ನಾಪೋಕ್ಲು, ಮಾ. ೨: ಹಿಂದೂ ಸಂಗಮ ಕಾರ್ಯಕ್ರಮ ಆಯೋಜನ ವೇಳೆ ಅಹಿತಕರ ಘಟನೆ ನಡೆದಿದ್ದು, ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಸರ್ಕಾರವನ್ನು ಆರೋಪಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಸಂಸದರ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಭಾಗದಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಿಗೆ ಬದುಕಲು ಕಷ್ಟ ಆಗುತ್ತಿದೆ ಎಂಬುದು ಗಂಭೀರವಾದ ವಿಚಾರ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನು ವ್ಯವಸ್ಥೆ ಕಾಪಾಡಬೇಕು ಎಂದರು. ಎಲ್ಲರಿಗೂ ಒಂದೇ ಕಾನೂನು ಪಾಲನೆ ಮಾಡುವಂತಾಗಬೇಕು. ತಕ್ಷಣ ಕೋಮುವಾದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಲ್ಲರನ್ನು ಸಮಾನವಾಗಿ ಪರಿಗಣಿಸಿ ಎಂದು ಪೊಲೀಸ್ ಇಲಾಖೆಗೆ ಸೂಚಿಸಿದರು. ಬಿಜೆಪಿ ಮುಖಂಡ ಮನು ಮುತ್ತಪ್ಪ ಮಾತನಾಡಿ ಹಿಂದೂ ಬಾಂಧವರು ನಾಪೋಕ್ಲು ಪಟ್ಟಣಕ್ಕೆ ಬರಲು ಹಿಂದೇಟು ಹಾಕುವಂತಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಹತ್ತಾರು ಕಾನೂನುಗಳನ್ನು ಹೇರಲಾಗುತ್ತಿದೆ. ಒಂದು ಕೋಮಿನವರಿಗೆ ಒಂದು ಕಾನೂನು ಮತ್ತೊಂದು ಕೋಮಿನವರಿಗೊಂದು ಕಾನೂನು ಹೇರಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಮಾಜಿ ಸಚಿವ ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಲ್ಲಮಾವಟಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕರವಂಡ ಲವ ನಾಣಯ್ಯ, ವೀರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಸುಬ್ರಮಣಿ, ಮಡಿಕೇರಿ ಗ್ರಾಮಾಂತರ ಮಂಡಲ ಬಿಜೆಪಿ ಕಾರ್ಯದರ್ಶಿ ಉಕ್ಕುಳಂಡ್ರ ಧನೋಜ್, ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಕರವಂಡ ಅಪ್ಪಣ್ಣ ಸೇರಿದಂತೆ ಇತರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಶಿವಚಾಳಿಯಂಡ ಜಗದೀಶ್, ಮಡಿಕೇರಿ ಗ್ರಾಮಾಂತರ ಬಿಜೆಪಿ ಮಂಡಲ ಉಪಾಧ್ಯಕ್ಷ ಅಮ್ಮಂಡ ಮನು ಮಹೇಶ್, ಮಡಿಕೇರಿ, ಬಿಜೆಪಿ ಮಂಡಲ ಗ್ರಾಮಾಂತರ ಓಬಿಸಿ ಅಧ್ಯಕ್ಷ ಬಿಎಂ ಪ್ರತೀಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎ. ಹರೀಶ್, ತಾಲೂಕು ಪಂಚಾಯತಿ ಮಾಜಿ ಸದಸ್ಯ ಉಮಾ ಪ್ರಭು, ಬಲ್ಲಮಾವಟಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹರೀಶ್, ಪಾರಾಣೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಾಡೆಯಂಡ ಕಟ್ಟಿ ಕುಶಾಲಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನೀಲಮ್ಮ. ಬಿಜೆಪಿ ಪಕ್ಷದ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಮುಖಂಡರು ಪಾಲ್ಗೊಂಡಿದ್ದರು.