ಮಡಿಕೇರಿ, ಮಾ.೩: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ತಾ. ೫ ರಂದು ಸಂಜೆ ೪ ಗಂಟೆಗೆ ಮೂರ್ನಾಡು ಕೊಡವ ಸಮಾಜದಲ್ಲಿ ‘೪ನೇ ಕೊಡವ ಪುಸ್ತಕ ಪತ್ತಾಯ” ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದು, ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ತೇಲಪಂಡ ಕೆ. ಸುಬ್ಬಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ ಮೂರ್ನಾಡು ಕೊಡವ ಸಮಾಜದ ಸದಸ್ಯರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.