ವೀರಾಜಪೇಟೆ, ಮಾ. ೨: ವೀರಾಜಪೇಟೆ ಗೌಡ ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಭರವಸೆ ನೀಡಿದರು.
ಕೊಡಗು ಗೌಡ ಸಮಾಜಗಳ ಒಕ್ಕೂಟ, ಕೊಡಗಿನ ಎಲ್ಲಾ ಗೌಡ ಸಮಾಜಗಳು ಮತ್ತು ಸಂಘಟನೆಗಳ ಸಹಯೋಗದಲ್ಲಿ ವೀರಾಜಪೇಟೆಯ ಗೌಡ ಸಮಾಜದಲ್ಲಿ ಕೊಡಗು ಗೌಡ ಸಮಾಜಕ್ಕೆ ಮದೆನಾಡಿನಲ್ಲಿ ಸರಕಾರದ ವತಿಯಿಂದ ಆರು ಎಕರೆ ಜಾಗವನ್ನು ಮಂಜೂರು ಮಾಡಿಸಿಕೊಟ್ಟ ಶಾಸಕರಿಗೆ ಅಭಿನಂದನೆ ಮತ್ತು ಕೃತಜ್ಞತೆ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೊಡಗು ಗೌಡ ಸಮಾಜಕ್ಕೆ ಸರಕಾರಿ ಜಮೀನನ್ನು ಮಂಜೂರು ಮಾಡಿಸಿಕೊಟ್ಟಿರುವುದು ಇಲ್ಲಿಯ ಶೈಕ್ಷಣಿಕ, ಸಾಂಸ್ಕöÈತಿಕ ಹಾಗೂ ಇತರ ಚಟುವಟಿಕೆಗಳಿಗೆ ಪೂರಕವಾಗಲಿದೆ. ಹಲವು ಸಮಯದಿಂದ ಬೇಡಿಕೆಯನ್ನು ಸರಕಾರದ ಮುಂದಿಟ್ಟಿದ್ದು, ಎದುರಾಗಿದ್ದ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ ಜಾಗ ಮಂಜೂರು ಮಾಡಲಾಗಿದೆ. ಜನಾಂಗದ ಶ್ರೇಯೋಭಿವೃದ್ಧಿಗೆ ಸಮಾಜದ ಸಂಸ್ಕöÈತಿ ಹಾಗೂ ಸಾಹಿತ್ಯದ ಅಭಿವೃದ್ಧಿಗೆ ಪೂರಕವಾಗಿರಲಿ ಎಂದರು.
ಕೊಡಗು ಜಿಲ್ಲೆಯ ಕೃಷಿಕರಲ್ಲಿ ನೂರಾರು ವರ್ಷಗಳಲ್ಲಿ ಕಾಡಿದ್ದ ಜಮ್ಮಾಬಾಣೆ ಸಮಸ್ಯೆಯನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವಲ್ಲಿ ಪ್ರಯತ್ನಿಸಲಾಗಿದೆ. ಕಂದಾಯ ಸಚಿವಕೃಷ್ಣ ಬೈರೇಗೌಡ ಅವರನ್ನು ಸದಾ ಸ್ಮರಿಸಬೇಕು ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಜಾತಿ ಮುಖ್ಯವಲ್ಲ. ಅಭಿವೃದ್ಧಿ ಮುಖ್ಯ ಎಂಬುದನ್ನು ಶಾಸಕರು ಸಾಬೀತು ಮಾಡುತ್ತಿದ್ದಾರೆ. ಸದಾ ಕ್ಷೇತ್ರದ ಅಭಿವೃದ್ದಿಗೆ ಪೂರಕವಾಗಿ ಕೆಲಸ ನಿರ್ವಹಿಸುತ್ತಾ ಬರುತ್ತಿದ್ದಾರೆ ಎಂದು ಶ್ಲಾಘಿಸಿದರು.
ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕೊಡಗು ಜಿಲ್ಲೆಯ ಸಂಸ್ಕöÈತಿ, ಪರಂಪರೆಯಲ್ಲಿ ಗೌಡ ಜನಾಂಗದ ಕೊಡುಗೆ ಕೂಡ ಅಪಾರವಾಗಿದೆ. ಸಾಮರಸ್ಯದ ಜೀವನ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಪರಸ್ಪರ ವೈರುದ್ಯಗಳನ್ನು ಬದಿಗೊತ್ತಿ ಬಾಂಧವ್ಯ ವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಗೌಡ ಜನಾÀಂಗದ ಏಳಿಗೆಗಾಗಿ ಸರಕಾರದಿಂದ ಜಾಗ ಮಂಜೂರು ಮಾಡಿಕೊಟ್ಟ ಶಾಸಕರ ಕಾರ್ಯ ಶ್ಲಾಘನೀಯ. ಇದೇ ರೀತಿ ಅರೆಭಾಷಿಕರ ಐನ್‌ಮನೆಗಳಿಗೂ ವಿಶೇಷವಾದ ಪ್ರಾತಿನಿದ್ಯ ನೀಡಬೇಕು. ಇಲ್ಲಿನ ಆಚಾರ ವಿಚಾರಗಳು ಅನಾವರಣಗೊಳ್ಳಬೇಕು ಎಂದು ಕೋರಿದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷ ಡಾ. ರಾಜೇಶ್ ತೇನನ ಪ್ರಾಸ್ತಾವಿಕವಾಗಿ ಮಾತನಾಡಿ, ದೃಢ ಸಂಕಲ್ಪವಿದ್ದರೆ ಎಲ್ಲವೂ ಸಾಧ್ಯ ಎಂದು ಶಾಸಕರು ನಿರೂಪಿಸಿದ್ದಾರೆ. ಅದೇ ರೀತಿ ಹಲವು ದಶಕಗಳಿಂದ ಸಮಸ್ಯೆಯಾಗಿ ಉಳಿದಿದ್ದ ಕೊಡಗಿನ ಜಮ್ಮಾ ಭೂಮಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ವಿದೇಯಕವನ್ನು ಸದನದಲ್ಲಿ ಮಂಡಿಸಿ ಕಾಯ್ದೆ ರೂಪಕ್ಕೆ ಜಾರಿಗೊಳಿಸುವಲ್ಲಿ ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಾಣಿಜ್ಯ ಇಲಾಖೆಯ ನಿವೃತ್ತ ಜಂಟಿ ಆಯುಕ್ತ ನಂಗಾರು ನಾಣಯ್ಯ, ವಾಸ್ತುಶಿಲ್ಪಿ ಮುಕ್ಕಾಟಿ ಮನೋಜ್ ಮಾತನಾಡಿದರು.
ವೀರಾಜಪೇಟೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟಿ ವಾಸು ಗಣಪತಿ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭ ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ವೀರಾಜಪೇಟೆ ಗೌಡ ಸಮಾಜದ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಹಾಗೂ ರಸ್ತೆ ಅಭಿವೃದ್ದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಶಾಸಕರಿಗೆ ನೀಡಲಾಯಿತು. ವೇದಿಕೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಖಜಾಂಚಿ ಅಂಬೆಕಲ್ ನವೀನ್, ಕಾರ್ಯದರ್ಶಿ ಪೇರಿಯನ ಉದಯ ಸೇರಿದಂತೆ ಇತರರು ಇದ್ದರು.
ಸನ್ಮಾನ
ಶಾಸಕ ಪೊನ್ನಣ್ಣ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಾಸ್ತುಶಿಲ್ಪಿ ಮುಕ್ಕಾಟಿ ಮನೋಜ್, ವಾಣಿಜ್ಯ ಇಲಾಖೆಯ ನಿವೃತ್ತ ಜಂಟಿ ಆಯುಕ್ತ ನಂಗಾರು ನಾಣಯ್ಯ ಅವರುಗಳನ್ನು ಒಕ್ಕೂಟದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭ ಕೊಡಗು ಗೌಡ ಯುವ ವೇದಿಕೆ ವತಿಯಿಂದ ಏಪ್ರಿಲ್ ೨೭-ಮೇ ೧೭ ರವರೆಗೆ ನಡೆಯುವ ಕ್ರಿಡಾಕೂಟದ ಕುಟುಂಬ-೨೦೨೬ ಪೋಸ್ಟರ್ ಅನ್ನು ಶಾಸಕರು ಬಿಡುಗಡೆಗೊಳಿಸಿದರು.
ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ ಸ್ವಾಗತಿಸಿ, ತೆಕ್ಕಡೆ ಆಶಾ ಪ್ರಾರ್ಥಿಸಿ, ಮುರ್ನಾಡು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಲ್ಲುಮುಟ್ಲು ಜಸ್ಮಿ ನಿರೂಪಿಸಿ, ವೀರಾಜಪೇಟೆ ಗೌಡ ಸಮಾಜದ ಕಾರ್ಯದರ್ಶಿ ಮಂಞAಡ್ರ ರೇಖಾ ಉಲ್ಲಾಸ್ ವಂದಿಸಿದರು.