ನಾಪೋಕ್ಲು, ಮಾ. ೨: ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ಅಂಕಗಳಿಸಿದ ನಿಡ್ತ ಗ್ರಾಮದ ಜೆ.ಎಸ್. ಪೂರ್ವಿಕ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೆ.ಪಿ.ಎಸ್ ಪ್ರೌಢಶಾಲೆ ನಾಪೋಕ್ಲು ಸಂಯುಕ್ತ ಆಶ್ರಯದಲ್ಲಿ ಕೆ.ಪಿ.ಎಸ್ ಪ್ರೌಢಶಾಲೆಯಲ್ಲಿ ನಡೆದ ದಿ. ಸೂದನ ರಾಘವಯ್ಯ ಮತ್ತು ಬಿ.ಆರ್ ಸಾಯಿನಾಥ್ ರವರ ದತ್ತಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ ಕೇಶವ ಕಾಮತ್, ತಾಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್, ಉಪನ್ಯಾಸಕಿ ಕೂಡಕಂಡಿ ಸೋನಿ ಸುದೀಪ್ ನಾಪೋಕ್ಲು ಕೆ.ಪಿ.ಎಸ್ ಶಾಲೆಯ ಉಪ ಪ್ರಾಂಶುಪಾಲ ಎಂ.ಎಸ್. ಶಿವಣ್ಣ, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೆರವಂಡ ಉಮೇಶ್, ಜಿಲ್ಲಾ ಗೌರವ ಕೋಶಾಧಿಕಾರಿ ಎಸ್ ಎಸ್. ಸಂಪತ್ ಕುಮಾರ್, ನಾಪೋಕ್ಲು ಕೆ.ಪಿ.ಎಸ್ ಶಾಲೆಯ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷ ಕೇಟೋಳಿರ ರಾಜ ಗಣಪತಿ, ಸಾಹಿತ್ಯ ಪರಿಷತ್ತಿನ ಸದಸ್ಯರಾದ ಶಾಂತಿ ಅರ್ಜುನ್, ಸನ್ಮಾನಿತ ವಿದ್ಯಾರ್ಥಿಯ ಪೋಷಕರಾದ ಸುರೇಶ್ ಮತ್ತು ಲೀಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.