ಗೋಣಿಕೊಪ್ಪಲು, ಮಾ. ೨: ದಕ್ಷಿಣ ಕೊಡಗಿನ ಕುಟ್ಟ ಗ್ರಾಮದಲ್ಲಿರುವ ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಕಾಮಗಾರಿಗೆ ವೀರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ಈ ಭಾಗದಲ್ಲಿ ಶತಮಾನಗಳಿಂದ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ನೂರಾರು ಕುಟುಂಬಗಳಿವೆ. ಇಲ್ಲಿಯ ಮಕ್ಕಳ ಉತ್ತಮ ವಿದ್ಯಾಭ್ಯಾಸ ಹಾಗೂ ಆಧುನಿಕ ಸೌಲಭ್ಯಗಳೊಂದಿಗೆ ಉತ್ತಮ ವ್ಯಾಸಂಗ ಮಾಡಲು ಸರಕಾರ ಅನೇಕ ಸವಲತ್ತುಗಳನ್ನು ಕಲ್ಪಿಸುತ್ತಿದೆ. ಇದರ ಸದುಪಯೋಗವನ್ನು ಸಮಾಜದವರು ಪಡೆದುಕೊಳ್ಳಬೇಕು. ರೂ. ೧ ಕೋಟಿ ೫೬ ಲಕ್ಷ ಅನುದಾನದಲ್ಲಿ ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣವಾಗಲಿದೆ ಎಂದು ಶಾಸಕ ಪೊನ್ನಣ್ಣ ತಿಳಿಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಮಂಡೆಪAಡ ಸುಜಾ ಕುಶಾಲಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಹಿರಿಯರಾದ ಪೆಮ್ಮಂಡ ಪೊನ್ನಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ವಲಯ ಅಧ್ಯಕ್ಷ ರಾಮಕೃಷ್ಣ, ಮಾಜಿ ವಲಯ ಅಧ್ಯಕ್ಷ ಮುಕ್ಕಾಟಿರ ಅಯ್ಯಪ್ಪ, ಯುವ ಕಾಂಗ್ರೆಸ್‌ನ ಫಾರ್ದಿನ್, ಕೆ. ಬಾಡಗ ವಲಯ ಅಧ್ಯಕ್ಷ ಚಿಮ್ಮಣಮಾಡ ರವಿ, ನಾಲ್ಕೇರಿ ವಲಯ ಅಧ್ಯಕ್ಷ ತೀತಿರ ಕಟ್ಟಿ ಕಾರ್ಯಪ್ಪ, ಅಣ್ಣಳಮಾಡ ಹರೀಶ್ ಪೂವಯ್ಯ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲೀರ ರಶೀದ್, ಪ್ರಮುಖರಾದ ಕುಂಡಚ್ಚಿರ ಮಂಜು ದೇವಯ್ಯ, ಮನು, ಐಟಿಡಿಪಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.