ಮಡಿಕೇರಿ, ಮಾ. ೨: ಅಪ್ಪಚ್ಚಿರ ಗೌತಮ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಗೆ ಸಂಬAಧಿಸಿದAತೆ ಮಡಿಕೇರಿ ಕೊಡವ ಸಮಾಜವು ಖಂಡನೆ ವ್ಯಕ್ತಪಡಿಸಿದೆ. ಜತೆಗೆ ಇಂದು ಎಸ್.ಪಿ. ಅವರನ್ನು ಭೇಟಿ ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ, ಕಾರ್ಯದರ್ಶಿ ಬೊಪ್ಪಂಡ ಸರಳ ಕರುಂಬಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕರಾದ ಕನ್ನಂಡ ಕವಿತ ಬೊಳ್ಳಪ್ಪ, ನಂದಿನೆರವAಡ ರವಿ ಬಸಪ್ಪ, ಮೂವೆರ ಜಯರಾಂ, ಶಾಂತೆಯAಡ ವಿಶಾಲ್ ಕಾರ್ಯಪ್ಪ, ಕಾಂಡೆರ ಲಲ್ಲು ಕುಟ್ಟಪ್ಪ, ಮಂಡಿರ ಸದಾ ಮುದ್ದಪ್ಪ, ಪಾಲೆಯಂಡ ರೂಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪೊನ್ನಂಪೇಟೆ ಕೊಡವ ಸಮಾಜ ಪೊಮ್ಮಕ್ಕಡ ಕೂಟ

ಶ್ರೀಮಂಗಲ: ನಾಪೋಕ್ಲು ಹಿಂದೂ ಸಂಗಮ ಕಾರ್ಯಕ್ರಮ ವಿಚಾರದಲ್ಲಿ ಅಪ್ಪಚ್ಚಿರ ಗೌತಮ್ ಅವರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆಯನ್ನು ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟ ಖಂಡಿಸಿ, ಇದರ ವಿರುದ್ಧ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಕೂಟದ ಅಧ್ಯಕ್ಷೆ ಪ್ರೊ. ಇಟ್ಟಿರ ಕಮಲಾಕ್ಷಿ ಬಿದ್ದಪ್ಪ ಮತ್ತು ಗೌರವ ಕಾರ್ಯದರ್ಶಿ ಬಲ್ಲಡಿಚಂಡ ಕಸ್ತೂರಿ ಸೋಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕೊಡಗಿನಲ್ಲಿ ಇಂತಹ ಕೃತ್ಯಗಳು ಶಾಂತಿ ಭಂಗಕ್ಕೆ ಕಾರಣವಾಗುತ್ತಿದ್ದು, ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಪೊಮ್ಮಕ್ಕಡ ಕೂಟದ ಆಡಳಿತ ಮಂಡಳಿ ಮತ್ತು ಸದಸ್ಯರ ಪರವಾಗಿ ಅಗ್ರಹಿಸಿದ್ದಾರೆ.

ಬೆಂಗಳೂರು ಕೊಡವ ಸಮಾಜ ಖಂಡನೆ : ಗಡಿಪಾರಿಗೆ ಆಗ್ರಹ

ಮಡಿಕೇರಿ: ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಬೆಂಗಳೂರು ಕೊಡವ ಸಮಾಜ ತಿಳಿಸಿದೆ.

ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ಹಾಗೂ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಮಂಡೇಟಿರ ಸುನಿಲ್ ಪೊನ್ನಣ್ಣ ಅವರುಗಳು ಮಡಿಕೇರಿಯ ಜಿಲ್ಲಾ ಸ್ಪತ್ರೆಗೆ ಭೇಟಿ ನೀಡಿ ಗೌತಮ್ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.

ನಂತರ ಮಾತ ನಾಡಿದ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಗಡಿಪಾರು ಮಾಡಬೇಕು ಮತ್ತು ಘಟನೆ ಮರುಕಳಿಸದಂತೆ ಪೊಲೀಸ್ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.