ದ್ದಾಪುರ, ಮಾ. ೩: ಮದ್ಯಪಾನ ಮಾಡಿ ವಾಹನ ಚಲಾಯಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಹಾನಿ ಮಾಡಿದ ಘಟನೆ ನೆಲ್ಲಿಹುದಿಕೇರಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಅತ್ತಿಮಂಗಲ ಕಡೆಯಿಂದ ಜಿಪ್ಸಿ ವಾಹನ (ಎಚ್ ಪಿ ೪೭ಎ ೫೭೧೬)ಅತೀ ವೇಗದಿಂದ ಬಂದು ನೆಲ್ಲಿಹುದಿಕೇರಿ ಬಳಿಯ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಪರಿಣಾಮ ಕೆಲಕಾಲ ಆ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು. ಸಾರ್ವಜನಿಕರು ವಾಹನ ಸವಾರರನ್ನು ಪರಿಶೀಲಿಸಿದ ಸಂದರ್ಭ ಚಾಲಕ ಮದ್ಯಪಾನ ಮಾಡಿರುವುದು ತಿಳಿದುಬಂದಿದೆ. ವಿದ್ಯುತ್ ಕಂಬಕ್ಕೆ ಹಾನಿಮಾಡಿರುವ ಕುರಿತು ಚೆಟ್ಟಳ್ಳಿ ಕಿರಿಯ ಅಭಿಯಂತರರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಚಾಲಕ ಕಾರ್ತಿಕ್ ವಿರುದ್ಧ ಪ್ರಕರಣ ದಾಖಲಾಗಿದೆ.