ಪೊನ್ನಂಪೇಟೆ, ಮಾ. ೫: ಗೋಣಿಕೊಪ್ಪಲು ಕಾವೇರಿ ಕಾಲೇಜು ವಿಜ್ಞಾನ ಸಂಘ, ನೇಚರ್ ಕ್ಲಬ್ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ರಾಷ್ಟಿçÃಯ ವಿಜ್ಞಾನ ದಿನ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪೊನ್ನಂಪೇಟೆ ಹಾಗೂ ಪಾಲಿಬೆಟ್ಟ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಡಾ.ಭವಾನಿ. ಕೆ. ಎಂ ಅವರು ಹೂ ಕುಂಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಮಾಹಿತಿ ನೀಡಿ, ಕೃತಕ ಬುದ್ಧಿಮತ್ತೆಯ ಜೊತೆಗೆ ವಿಕಸಿತ ಭಾರತಕ್ಕೆ ಮಹಿಳಾ ವಿಜ್ಞಾನಿಗಳು ಯಾವ ರೀತಿ ಕೊಡುಗೆ ನೀಡಬಹುದು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭ ವಿಜ್ಞಾನ ವಿಷಯಕ್ಕೆ ಸಂಬAಧಿಸಿದAತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ವಿದ್ಯಾರ್ಥಿಗಳಿಂದ ನೃತ್ಯ ಹಾಗೂ ವಿಜ್ಞಾನದ ಮಹತ್ವ ಸಾರುವ ಕಿರು ನಾಟಕ ಮೂಡಿ ಬಂತು.
ಕಾವೇರಿ ಕಾಲೇಜು ಉಪ ಪ್ರಾಂಶುಪಾಲೆ ಪ್ರೊ.ಎಂ. ಎಸ್. ಭಾರತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕಿ ಡಾ. ನಯನಾ ತಮ್ಮಯ್ಯ, ಕಾರ್ಯಕ್ರಮ ಸಂಚಾಲಕ ಡಾ. ಅಭಿಷೇಕ್ ಎನ್.ಎಸ್, ವಿಜ್ಞಾನ ವಿಭಾಗದ ಉಪನ್ಯಾಸಕರಾದ ಡಾ. ಮಾರಣ್ಣ, ಶಶಿಕಲಾ, ಭಾವನ ಇನ್ನಿತರರು ಉಪಸ್ಥಿತರಿದ್ದರು.
ನಾಪೋಕ್ಲು, ಮಾ. ೫: ರಾಷ್ಟಿçÃಯ ವಿಜ್ಞಾನ ದಿನಾಚರಣೆ ಅಂಗವಾಗಿ ಇಲ್ಲಿನ ಡಾ ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಹಾಗೂ ವೈಜ್ಞಾನಿಕ ಪ್ರಯೋಗಗಳ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ೬, ೭, ೮ ಮತ್ತು ೯ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಯನ್ನು ಆಯೋಜಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಯಿತು,
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನೇತಾಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿ. ಎಸ್. ಸುರೇಶ್ ಮಾತನಾಡಿ ವೈಜ್ಞಾನಿಕ ಸಂಶೋಧನೆಗಳು ಜಗತ್ತಿನ ಪಥವನ್ನು ಬದಲಿಸಿವೆ. ನೂರಾರು ಸಂಶೋಧನೆಗಳು ಜಗತ್ತು ಬದಲಾಗುವಂತೆ ಮಾಡಿದೆ ಎಂದರು.
ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮನೋ ಭಾವನೆಯನ್ನು ಬೆಳೆಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಸತಿ ಶಾಲೆಯ ಪ್ರಾಂಶುಪಾಲರಾದ ಕೆ.ಡಿ ನೀತಾ ಮಾತನಾಡಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯನ್ನು ಬಳಸಿಕೊಳ್ಳಬೇಕು. ಕೇವಲ ಪರೀಕ್ಷೆಗಾಗಿ ಕಲಿಕೆ ಆಗಬಾರದು ಎಂದರು.
ವಿಜ್ಞಾನ ಶಿಕ್ಷಕಿ ರೇಷ್ಮಾ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳು ದಿನನಿತ್ಯ ವಿಜ್ಞಾನದ ಕುರಿತು ಕುತೂಹಲ, ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು. ಶಿಕ್ಷಕ ಲಕ್ಷö್ಮಣ ಸ್ವಾಗತಿಸಿದರು. ಕೆ.ಯು. ಸುಶ್ಮಿತ ವಂದಿಸಿದರು.ಶನಿವಾರಸAತೆ, ಮಾ. ೫: ಸಮೀಪದ ನಿಡ್ತ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟಿçÃಯ ವಿಜ್ಞಾನ ದಿನಾಚರಣೆಯನ್ನು ವಿಜ್ಞಾನದಲ್ಲಿ ಮಹಿಳೆಯರು ವೇಗವರ್ಧಿತ ವಿಕಸಿತ ಭಾರತ ಧ್ಯೇಯದಡಿಯಲ್ಲಿ ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ವಿಜ್ಞಾನ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಮುಖ್ಯಶಿಕ್ಷಕಿ ಎಂ.ಸಿ.ನಳಿನಿ, ಗಣಿತ ಶಿಕ್ಷಕ ಜಗದೀಶ್ ಅವರು ಸಹಶಿಕ್ಷಕರೊಂದಿಗೆ ಉದ್ಘಾಟಿಸಿ ಮಾತನಾಡಿದರು.
ವಿಜ್ಞಾನ ಶಿಕ್ಷಕ ಡಿ.ಎಸ್.ಮಧುಕುಮಾರ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ವಿಜ್ಞಾನ ದಿನಾಚರಣೆಯ ಮಹತ್ವವನ್ನು ತಿಳಿಸಿದರು.
ಶಿಕ್ಷಕರಾದ ಮಾರುತಿ ಅರೇರ್, ಎಂ.ವಿ.ರೂಪಾ, ಡಿ.ಎಂ. ಮಹಾದೇವಿ, ಗೀತಾ ಹಾಜರಿದ್ದರು. ವಿದ್ಯಾರ್ಥಿಗಳು ವಿವಿಧ ರೀತಿಯ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿದರು.